ಸಿಐಡಿ ತನಿಖೆಗೆ ಡಿ. ಕೆ. ಸುರೇಶ್ ಆಗ್ರಹ!

ರಾಮನಗರ, ಏಪ್ರಿಲ್ 24; ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ಬಮೂಲ್ ನೇಮಕಾತಿ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿ ಕಳೆದ ತಿಂಗಳು ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ, ಬೆಂಗಳೂರು ( ಬಮೂಲ್ ) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿನ ಲಿಖಿತ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಹಕಾರ ಸಚಿವ ಎಸ್. ಟಿ. ಸೋಮಶೇಖರ್‌ಗೆ ಪತ್ರ ಬರೆದು ಬಮೂಲ್‌ನ ವಿವಿಧ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಸಿಐಡಿ ಅಥವಾ ಎಸ್‌ಐಟಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 297 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮವಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಪುನಃ ಹೊಸದಾಗಿ ಲಿಖಿತ ಪರೀಕ್ಷೆಯನ್ನು ಪಾರದರ್ಶಕವಾಗಿ ಮಾಡಲು ಸಂಬಂಧಪಟ್ಟರವರಿಗೆ ಸೂಕ್ತ ಆದೇಶ ನೀಡುವಂತೆ ಸಂಸದರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಈ ಪತ್ರದ ಹಿನ್ನಲೆಯಲ್ಲಿ ಬಮೂಲ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿಯ ಲಿಖಿತ ಪರೀಕ್ಷೆಯಲ್ಲಿನ ಅಕ್ರಮಗಳ ಮತ್ತು ನ್ಯೂನತೆಗಳ ಕುರಿತಂತೆ ನಿಯಮಾನುಸಾರ ಪರಿಶೀಲಿಸಿ ತನಿಖೆ ನಡೆಸಲು ಇಲಾಖೆಯ ಅಧಿಕಾರಿಯನ್ನು ನೇಮಕ ಮಾಡುವಂತೆ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವ ಎಸ್. ಟಿ. ಸೋಮಶೇಖರ್ ಸೂಚಿಸಿದ್ದಾರೆ.

ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್. ಸಿ. ರಾಧ ಬಮೂಲ್ ನೇಮಕಾತಿ ಅಕ್ರಮಗಳ ತನಿಖೆಗೆ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪ್ರಸಾದ್ ರೆಡ್ಡಿಯನ್ನು ತನಿಖಾಧಿಕಾರಿಯನ್ನಾಗಿ ನೇಮಕಮಾಡಿದ್ದಾರೆ. ಅಗತ್ಯ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ನೀಡುವಂತೆ ಆದೇಶ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಭಾರತ ಜೂನ್ 9 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಐದು ಪಂದ್ಯಗಳ T20I ಸರಣಿಯನ್ನು ಆಡಲಿದೆ!

Sun Apr 24 , 2022
ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಕ್ತಾಯದ ನಂತರ ಹದಿನೈದು ದಿನಗಳೊಳಗೆ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಐದು ಪಂದ್ಯಗಳ ಟಿ 20 ಅಂತರರಾಷ್ಟ್ರೀಯ ಸರಣಿಯನ್ನು ತವರಿನಲ್ಲಿ ಆಡಲಿದೆ, ಆರಂಭಿಕ ಪಂದ್ಯವನ್ನು ಜೂನ್ 9 ರಂದು ನವದೆಹಲಿಯಲ್ಲಿ ನಿಗದಿಪಡಿಸಲಾಗಿದೆ. ಐದು ಪಂದ್ಯಗಳು 11 ದಿನಗಳ ಕಾಲ ನಡೆಯಲಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ಇದು 2022 ರಲ್ಲಿ ತವರಿನಲ್ಲಿ ಭಾರತದ ಮೂರನೇ T20I ಸರಣಿಯಾಗಿದೆ; ಅವರು ಈ […]

Advertisement

Wordpress Social Share Plugin powered by Ultimatelysocial