ಉದ್ಯಾನಗಳಿಗೆಂದು ಮೀಸಲಿಟ್ಟಿದ್ದ ಜಾಗದಲ್ಲಿ ನಿರ್ಮಾಣಗೊಂಡಿದ್ದ 15 ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್ ಗಳನ್ನು ಶನಿವಾರ ಬಿಡಿಎ ತೆರವುಗೊಳಿಸಿದೆ.

ಬೆಂಗಳೂರು: ನಗರದ ಕೂಡ್ಲು ಮತ್ತು ಸಿಂಗಸಂದ್ರದಲ್ಲಿ ಉದ್ಯಾನಗಳಿಗೆಂದು ಮೀಸಲಿಟ್ಟಿದ್ದ ಜಾಗದಲ್ಲಿ ನಿರ್ಮಾಣಗೊಂಡಿದ್ದ 15 ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್ ಗಳನ್ನು ಶನಿವಾರ ಬಿಡಿಎ  ತೆರವುಗೊಳಿಸಿದೆ.ಬೆಂಗಳೂರು ದಕ್ಷಿಣ ತಾಲೂಕು ಮತ್ತು ಆನೇಕಲ್ ತಾಲೂಕಿನ ಕೂಡ್ಲು ಮತ್ತು ಸಿಂಗಸಂದ್ರದಲ್ಲಿ ಏರ್ ಕ್ರಾಫ್ಟ್ ಎಂಪ್ಲಾಯೀಸ್ ಹೌಸಿಂಗ್ ಸೊಸೈಟಿ ಬಿಡಿಎದಿಂದ ಜಾಗವನ್ನು ಪಡೆದು ಬಡಾವಣೆ ನಿರ್ಮಾಣ ಮಾಡಿತ್ತು.ನಿಯಮದ ಪ್ರಕಾರ ಈ ಬಡಾವಣೆಗಳಲ್ಲಿ ಒಟ್ಟು 39 ಉದ್ಯಾನಗಳ ನಿರ್ಮಾಣಕ್ಕೆ ಜಾಗವನ್ನು ಮೀಸಲಿಟ್ಟು, ಈ ಪೈಕಿ 2015 ರಲ್ಲಿ 16 ಉದ್ಯಾನಗಳನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲಾಗಿತ್ತು.ಆದರೆ, ಮೀಸಲಿಟ್ಟಿದ್ದ ಉಳಿದ 18 ಸ್ಥಳಗಳಲ್ಲಿ ಅನಧಿಕೃತವಾಗಿ ಶೆಡ್ ಗಳು ಮತ್ತು ಆರ್ ಸಿಸಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಶನಿವಾರ ಬಿಡಿಎ ವಿಶೇಷ ಕಾರ್ಯನಿರತ ಪಡೆಯ ಡಿವೈಎಸ್ ಪಿ ರವಿಕುಮಾರ್ ಮತ್ತು ಕಾರ್ಯಪಾಲಕ ಅಭಿಯಂತರ ಕೆ.ಮಹದೇವಗೌಡ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳು ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 15 ತಾತ್ಕಾಲಿಕ ಶೆಡ್ ಗಳು, 4 ಅಂಗಡಿಗಳು, 20 ಕ್ಕೂ ಹೆಚ್ಚು ಮನೆಗಳು, ಪ್ರಾರ್ಥನಾ ಮಂದಿರದಿಂದ ಒತ್ತುವರಿಯಾಗಿ ನಿರ್ಮಾಣಗೊಂಡಿದ್ದ ಕಟ್ಟಡ ಸೇರಿದಂತೆ 30 ಕ್ಕೂ ಹೆಚ್ಚು ಶೆಡ್ ಗಳನ್ನು ತೆರವುಗೊಳಿಸಿದ್ದಾರೆ.ಈ ಒತ್ತುವರಿಯನ್ನು ತೆರವುಗೊಳಿಸಿದ ಜಾಗ ಸೇರಿದಂತೆ 18 ಉದ್ಯಾನಗಳಿಗೆ ಸೇರಿದ ಒಟ್ಟು 25 ಎಕರೆ 6 ಗುಂಟೆ ಜಾಗವನ್ನು ಬಿಡಿಎ ಅಧಿಕಾರಿಗಳು ಮರುವಶಕ್ಕೆ ಪಡೆದಿದ್ದಾರೆ. ಸದರಿ ಜಾಗವನ್ನು ಉದ್ಯಾನ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಸದ್ಯದಲ್ಲೇ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಡಿಎಗೆ ಸೇರಿರುವ ಸಾವಿರಾರು ಎಕರೆಯಷ್ಟು ಜಾಗವನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುತ್ತಿದೆ. ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವವರು ಸ್ವಯಂ ಪ್ರೇರಿತರಾಗಿ ಬಿಡಿಎ ಜಾಗವನ್ನು ವಾಪಸ್ ನೀಡಬೇಕು. ಇಲ್ಲವಾದರೆ, ಬಿಡಿಎ ಜಾಗವನ್ನು ವಶಪಡಿಸಿಕೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಿದೆ ಎಂದು ಹೇಳಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ಧರಿಸಿದ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರನ್ನು ತೆಗೆದುಹಾಕಿ: ಕಟಕ ಕಾಂಗ್

Sat Feb 5 , 2022
  ಹಿಜಾಬ್ ಧರಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸಿದ ರಾಜ್ಯದ ಉಡುಪಿ ಜಿಲ್ಲೆಯ ಕುಂದಾಪುರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ವಜಾಗೊಳಿಸುವಂತೆ ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸರ್ಕಾರವು ವಿಶ್ವವಿದ್ಯಾಲಯದ ಪೂರ್ವ ಮಟ್ಟದಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿಲ್ಲ. ಉಡುಪಿ ಜಿಲ್ಲೆಯ ಕುಂದಾಪುರ ಕಾಲೇಜಿನ ಪ್ರಾಂಶುಪಾಲರು ಹಿಜಾಬ್ ಧರಿಸಿದ್ದ 19 ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ದ್ವಾರವನ್ನು ಮುಚ್ಚಿ ಕಾಲೇಜು ಪ್ರವೇಶಿಸದಂತೆ ತಡೆದಿದ್ದಾರೆ. ಇದು […]

Advertisement

Wordpress Social Share Plugin powered by Ultimatelysocial