ಮುಲಾಯಂ ಸೊಸೆಗೆ ಶಾಕ್ ನೀಡಿದ ಬಿಜೆಪಿ :ಅಪರ್ಣಾ ಯಾದವ್ ಗೆ ತಪ್ಪಿದ ಟಿಕೆಟ್!

ಲಕ್ನೋ: ಉತ್ತರ ಪ್ರದೇಶ ಚುನಾವಣಾ ಕಣ ರಂಗೇರುತ್ತಿದೆ. ಭಾರೀ ಚರ್ಚೆಯ ಬಳಿಕ ಬಿಜೆಪಿಯು ಲಕ್ನೋ ಸೀಟುಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಲಕ್ನೋನ ಎಲ್ಲಾ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇತ್ತೀಚೆಗೆ ಬಿಜೆಪಿಗೆ ಸೇರಿದ್ದ ಅಪರ್ಣಾ ಯಾದವ್ ಗೆ ಶಾಕ್ ನೀಡಿದೆ.ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇತ್ತೀಗಷ್ಟೇ ಬಿಜೆಪಿ ಸೇರಿದ್ದರು. ಇವರು ಲಕ್ನೋ ಕಂಟೋನ್ಮೆಂಟ್ ನಲ್ಲಿ ಟಿಕೆಟ್ ಬಯಸಿದ್ದರು. ಇದೇ ಕ್ಷೇತ್ರದಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ರಾಜೇಶ್ವರ್ ಸಿಂಗ್ ಕೂಡಾ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಸಚಿವ ಬ್ರಿಜೇಶ್ ಪಾಠಕ್ ಗೆ ಟಿಕೆಟ್ ನೀಡಿದೆ.ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇತ್ತೀಗಷ್ಟೇ ಬಿಜೆಪಿ ಸೇರಿದ್ದರು. ಇವರು ಲಕ್ನೋ ಕಂಟೋನ್ಮೆಂಟ್ ನಲ್ಲಿ ಟಿಕೆಟ್ ಬಯಸಿದ್ದರು. ಇದೇ ಕ್ಷೇತ್ರದಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ರಾಜೇಶ್ವರ್ ಸಿಂಗ್ ಕೂಡಾ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಸಚಿವ ಬ್ರಿಜೇಶ್ ಪಾಠಕ್ ಗೆ ಟಿಕೆಟ್ ನೀಡಿದೆ.ಅಪರ್ಣಾ ಯಾದವ್ ಸಮಾಜವಾದಿ ಪಕ್ಷವನ್ನು ಬಿಟ್ಟು ಕೆಲ ದಿನಗಳ ಹಿಂದೆ ಬಿಜೆಪಿ ಸೇರಿದ್ದರು. ಅಪರ್ಣಾ ಯಾದವ್ ಬಿಜೆಪಿ ಸೇರಲು ಪ್ರಮುಖ ಕಾರಣ ಎಸ್‌ಪಿ ಅವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲ ಎನ್ನುವುದೇ ಕಾರಣ ಎನ್ನಲಾಗಿತ್ತು. ಆದರೆ ಅಪರ್ಣಾ ಯಾದವ್ ಈ ವಿಚಾರವನ್ನು ತಳ್ಳಿ ಹಾಕಿದ್ದರು. “ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ನೀತಿಗಳಿಂದ ನಾನು ಪ್ರಭಾವಿತಳಾಗಿದ್ದೆ” ಎಂದಿದ್ದರು.ಬಿಜೆಪಿ ಸಂಸದೆ ರೀಟಾ ಬಹುಗುಣ ಪುತ್ರ ಮಯಾಂಕ್ ಜೋಶಿ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ನನಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ - ಶ್ರೀಮಂತ ಪಾಟೀಲ್ ಹೇಳಿಕೆ

Wed Feb 2 , 2022
ಕಳೆದ ಬಾರಿ ನನಗೆ ಸಚಿವ ಸ್ಥಾನ ತಪ್ಪಿ ಹೋಗಿತ್ತು ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ.ನಾನು ಸಚಿವ ಸ್ಥಾನ ಕೊಡಿ ಎಂದು ಇನ್ನು ಕೇಳುವುದಿಲ್ಲ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.ಕಾಗವಾಡದಲ್ಲಿ ಮಾತನಾಡಿದ ಪಾಟೀಲ್, ನಿನಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ನಮ್ಮ ಪಕ್ಷದ ನಾಯಕರು ಭರವಸೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಸಚಿವ ಸ್ಥಾನದ ಬಗ್ಗೆ ಮಾತನಾಡುವುದಿಲ್ಲ ಎಂದು ಶ್ರೀಮಂತ ಪಾಟೀಲ್ ಹೇಳಿದ್ದಾರೆ.ನಾನು ಸಚಿವ ಸ್ಥಾನದ […]

Advertisement

Wordpress Social Share Plugin powered by Ultimatelysocial