ದಾವಣಗೆರೆ: ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಿದ್ದ ಬಸ್

ದಾವಣಗೆರೆ: ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಿದ್ದ ಬಸ್​; ತಪ್ಪಿದ ಭಾರಿ ದುರಂತ
ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20 ಜನರಿಗೆ ಗಾಯ ಆಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ದಾವಣಗೆರೆ: ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಸ್​ ಬಿದ್ದ ದುರ್ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಬಳಿ ನಡೆದಿದೆ.

ಎದುರಿಗೆ ಬಂದ ಬೈಕ್​ಗೆ ದಾರಿ ಬಿಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾರಿ ದುರಂತ ತಪ್ಪಿದೆ. ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20 ಜನರಿಗೆ ಗಾಯ ಆಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರ: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣು
ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾದ ದುರ್ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಶೆಡ್​​ನಲ್ಲಿ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲತವಾಡ ಪಟ್ಟಣ ನಿವಾಸಿ ಅಮರಪ್ಪ ಗಂಗನಗೌಡ ಆತ್ಮಹತ್ಯೆ ಮಾಡಿಕೊಂಡ ರೈತ. ವಿವಿಧ ಬ್ಯಾಂಕ್ ಹಾಗೂ ಖಾಸಗಿಯಾಗಿ 2.75 ಲಕ್ಷ ಸಾಲ ಮಾಡಿದ್ದ ರೈತ ಸಾಲ ಮರುಪಾವತಿ ಮಾಡಲಾಗದ್ದಕ್ಕೆ ನೇಣಿಗೆ ಶರಣಾಗಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು, ಕಂದಾಯ ಇಲಾಖೆ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ದಲಿತ ಮಹಿಳೆಯ ಮೇಲೆ ಹಲ್ಲೆ
ಕ್ಷುಲ್ಲಕ ಕಾರಣಕ್ಕೆ ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿದ ಘಟನೆ ವಿಜಯಪುರದ ವಿವೇಕನಗರದಲ್ಲಿ ನಡೆದಿದೆ. ರೂಪಾ ಇಂಚಗೇರಿ ಎಂಬವರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಹಲ್ಲೆ ಬಳಿಕ ಕಿಡ್ನ್ಯಾಪ್ ಮಾಡಲು ಯತ್ನ ಆರೋಪವೂ ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಲ್ಟಿ ವಿಟಮಿನ್ ಮಾತ್ರೆ ಸೇವಿಸುವಾಗ ಇರಲಿ ಈ ಬಗ್ಗೆ ಗಮನ

Wed Dec 22 , 2021
ದೇಹದಲ್ಲಿನ ಪೌಷ್ಟಿಕಾಂಶಗಳ ಕೊರತೆಯನ್ನು ಪೂರೈಸಲು ಕೆಲವರು ಮಲ್ಟಿ ವಿಟಮಿನ್ ಅನ್ನು ತೆಗೆದುಕೊಳ್ಳುತ್ತಾರೆ. ದೇಹಕ್ಕೆ ವಿಟಮಿನ್ ಗಳು ಬಹಳ ಮುಖ್ಯ ನಿಜ. ಆದರೆ ಕೆಲವೊಮ್ಮೆ ಹೆಚ್ಚಿನ ವಿಟಮಿನ್ ಗಳು ದೇಹಕ್ಕೆ ಹಾನಿಯನ್ನುಂಟು ಮಾಡುತ್ತವೆ. ಹಾಗಾಗಿ ಮಲ್ಟಿ ವಿಟಮಿನ್ ಸೇವಿಸುವಾಗ ಈ ಸಲಹೆ ಪಾಲಿಸಿ. ಮಲ್ಟಿ ವಿಟಮಿನ್ ಮಾತ್ರೆಗಳನ್ನು ಸೇವಿಸುವ ಮೊದಲು ನಿಮಗೆ ಜೀವಸತ್ವಗಳ ಅಗತ್ಯವಿದೆಯೇ? ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಬೇಕು. ಅದಕ್ಕಾಗಿ ವೈದ್ಯರನ್ನು ಭೇಟಿ ಮಾಡಿ. ವೈದ್ಯರ ಸಲಹೆ ಮೇರೆಗೆ ಮಲ್ಟಿ ವಿಟಮಿನ್ […]

Advertisement

Wordpress Social Share Plugin powered by Ultimatelysocial