ಹೆಚ್.ಡಿ. ದೇವೇಗೌಡರ 90 ನೇ ಹುಟ್ಟುಹಬ್ಬ:

 

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಹಾರೈಸಿದ್ದಾರೆ.

ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು.

ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದಯಪಾಲಿಸಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ದೇವೇಗೌಡರಿಗೆ ಶುಭಕೋರಿದ್ದಾರೆ. ಹಿರಿಯ ನಾಯಕರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮ ನಾಡಿಗೆ ದೇವೇಗೌಡರ ಮಾರ್ಗದರ್ಶನ ಇನ್ನಷ್ಟು ದೀರ್ಘಕಾಲ ದೊರಕಲಿ ಎಂದು ಆಶಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ಭಾರತದ ಮಾಜಿ ಪ್ರಧಾನಮಂತ್ರಿಗಳು, ಮಣ್ಣಿನಮಗ, ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು ಹಾಗೂ ನನ್ನ ಗೌರವಪೂರ್ವಕ ಪ್ರಣಾಮಗಳು.

ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಆವಿಸ್ಮರಣೀಯ ಕೊಡುಗೆ ನೀಡಿದವರು ಇವರು. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ಅವರು ಭಾರತದ ರಾಜಕೀಯ ಕರ್ಮಯೋಗಿ. ತೊಂಬತ್ತರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ. ಸದಾ ನನ್ನ ಕೈಹಿಡಿದು ಮುನ್ನಡೆಸಿದ ಅವರು ನನ್ನ ಪಾಲಿಗೆ ತಂದೆಯಷ್ಟೇ ಅಲ್ಲ; ಗುರು, ದೈವ, ಶಕ್ತಿಯೂ ಹೌದು. ನನಗಷ್ಟೇ ಅಲ್ಲ, ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಅವರ ಸೇವೆ-ಮಾರ್ಗದರ್ಶನ ಅಗತ್ಯವಿದೆ. ಆ ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ಹಿರಿಯರು, ಮಾಜಿ ಪ್ರಧಾನಮಂತ್ರಿಗಳು, ಆತ್ಮೀಯರಾದ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ಭಗವಂತನ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೋಧಿ ರಫ್ತಿನ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ...!

Wed May 18 , 2022
ಕೇಂದ್ರ ಸರ್ಕಾರವು ಮೇ 13ರಂದು ಹೊರಡಿಸಲಾದ ಗೋಧಿ ರಫ್ತು ನಿಷೇಧದ ಆದೇಶವನ್ನು ಸಡಿಲಗೊಳಿಸಿದೆ. ಕಸ್ಟಮ್ಸ್ ಇಲಾಖೆಯ ವ್ಯವಸ್ಥೆಗಳಲ್ಲಿ ನೋಂದಾಯಿಸಲಾದ ಮತ್ತು ಮೇ 13 ರ ಮೊದಲು ಪರೀಕ್ಷೆಗೆ ಹಸ್ತಾಂತರಿಸಲಾದ ರಫ್ತು ಸರಕುಗಳನ್ನು ಅನುಮತಿಸಲು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಮೇ 17 ರಂದು ತಿಳಿಸಿದೆ. ಈಜಿಪ್ಟ್ ಸರ್ಕಾರವು ಅನುಮತಿ ನೀಡುವಂತೆ ಮಾಡಿದ ಮನವಿಯ ನಂತರ ಈಜಿಪ್ಟ್‌ಗೆ ಹೋಗುವ ಗೋಧಿ ರವಾನೆಗೆ ಸರ್ಕಾರವು ಅನುಮತಿ ನೀಡಿತು. ಇದು ಈಗಾಗಲೇ ಕಾಂಡ್ಲಾ ಬಂದರಿನಲ್ಲಿ […]

Advertisement

Wordpress Social Share Plugin powered by Ultimatelysocial