ನದಿಯಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆ.

ಪುಣೆ: ಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಿಂದ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದೊಂದು ಆಕಸ್ಮಿಕ ಸಾವು ಎಂದು ಪೊಲೀಸರು ವರದಿ ಮಾಡಿದ್ದಾರೆ. ಎಲ್ಲಾ ಏಳು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಟುಂಬ ಸದಸ್ಯರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದರೂ, ಎಲ್ಲಾ ಆಯಾಮಗಳಲ್ಲಿ ಪರಿಶೀಲಿಸಲಾಗುತ್ತಿದೆ.

ವಿವರವಾದ ತನಿಖೆ ನಡೆಸುವವರೆಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನವರಿ 18 ರಂದು ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

ನಂತರ ಸ್ಥಳೀಯ ಮುನ್ಸಿಪಲ್ ಕಾರ್ಪೋರೇಶನ್ ಜೊತೆಗೆ ಜಂಟಿ ಕಾರ್ಯಾಚರಣೆ ಆರಂಭಿಸಲಾಯಿತು. ಸೋಮವಾರ ನಾಲ್ಕು ಮೃತದೇಹಗಳು ಪತ್ತೆಯಾಗಿದೆ. ಮೃತರ ಪೈಕಿ ಒಬ್ಬರ ಜೇಬಿನಿಂದ ಮೊಬೈಲ್ ಫೋನ್ ಪತ್ತೆಯಾಗಿದೆ. ಇದರಿಂದ ಅವರು ಗುರುತು ಪತ್ತೆ ಮಾಡಲು ಸಾಧ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮೂವರ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಎಲ್ಲಾ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪರೀಕ್ಷೆಯಲ್ಲಿ ನಕಲು ಮಾಡಬಹುದು, ಜೀವನದಲ್ಲಿ ಯಶಸ್ವಿಯಾಗುವುದಿಲ್ಲ .

Fri Jan 27 , 2023
ನವದೆಹಲಿ,ಜ.27- ಪರೀಕ್ಷೆಯಲ್ಲಿ ನಕಲು ಮಾಡಿ ಯಶಸ್ವಿಯಾದವರು, ಜೀವನದಲ್ಲಿ ನಕಲು ಮಾಡಲಾಗಲ್ಲ, ಯಶಸ್ವಿಯಾಗುವುದಿಲ್ಲ. ಆದ್ದರಿಂದ ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳು ದೂರ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಪರೀಕ್ಷಾ ಪೇ ಚರ್ಚಾದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳಿಂದ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಕಾಪಿ, ನಕಲು ಮೂಲಕ ತಮ್ಮ ಗಾಡಿ ಓಡಿಸುವವರು ತಾವು ಪರೀಕ್ಷಾ ಕೊಠಡಿಯಲ್ಲಿ ಕಾವಲಿಗಿರುವ ಸೂಪರ್‍ ವೈಸರ್‍ರಿಗೆ ಯಾಮಾರಿಸಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ನಕಲು […]

Advertisement

Wordpress Social Share Plugin powered by Ultimatelysocial