ದೆಹಲಿ ಡಿಸಿಎಂ ಬಂಧನ ವಿರೋದಿಸಿ ಎಎಪಿ ದೇಶಾದ್ಯಂತ ಪ್ರತಿಭಟನೆ.

 

ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷ ದೇಶಾದ್ಯಂತ್ಯ ಪ್ರತಿಭಟನೆ ನಡೆಸಿತು. ಭೋಪಾಲ್, ಚಂಡೀಗಢ, ದೆಹಲಿ ಮತ್ತು ಇತರ ನಗರಗಳಲ್ಲಿ ಬಿಗಿ ಭದ್ರತೆಯ ನಡುವೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರಯ.ಈ ನಡುವೆ ದೆಹಲಿಯ ಸಿಬಿಐ ಪ್ರಧಾನ ಕಚೇರಿಯ ಹೊರಗೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿದರು.ಸಿಬಿಐ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಮನಿಶ್ ಸಿಸೋಡಿಯಾ ಅವರನ್ನು ನಿನ್ನೆ ಬಂಧಿಸಿ ಇಂದು‌ ನ್ಯಾಯಾಲಯಕ್ಕೆ ಹಾಜರು ಪಡಿಸಿತು. ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ಮತ್ತು ಸಿಬಿಐ 5 ದಿನಗಳ ಬಂಧನ ಸಮಯದ ಅರ್ಜಿ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಬಗ್ಗೆ ಸಿಬಿಐ ಅಧಿಕಾರಿಗಳು ಭಿನ್ನಾಭಿಪ್ರಾಯ ಹೊಂದಿದ್ದಾರೆ. “ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಬಂಧನವನ್ನು ವಿರೋಧಿಸಿದ್ದಾರೆ ಎಂದು ನನಗೆ ಹೇಳಲಾಗಿದೆ ಎಂದು ತಿಳಿಸಿದ್ದಾರೆ.ಸಿಬಿಐ ಬಗ್ಗೆ ಅಪಾರ ಗೌರವವಿದೆ ಮತ್ತು ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಆದರೆ ಅವರನ್ನು ಬಂಧಿಸಲು ರಾಜಕೀಯ ಒತ್ತಡ ಹೆಚ್ಚಾಗಿದ್ದರಿಂದ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು ಎಂದು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ತಿರುಪತಿ ತಿಮ್ಮಪ್ಪನ ಭಕ್ತರ ಗಮನಕ್ಕೆ:

Tue Feb 28 , 2023
ಆಂಧ್ರ ಪ್ರದೇಶ: ತಿರುಮಲ ತಿರುಪತಿ ದೇವಸ್ಥಾನಗಳು (TTD) ಶ್ರೀವಾರಿ ಸರ್ವದರ್ಶನದಲ್ಲಿ ಲಡ್ಡು ಪ್ರಸಾದ ವಿತರಣೆ, ಕೊಠಡಿಗಳ ಹಂಚಿಕೆ ಮತ್ತು ಮರುಪಾವತಿ ಪಾವತಿ ಕೌಂಟರ್‌ಗಾಗಿ ಮಾರ್ಚ್ 1, 2023ರ ನಾಳೆಯಿಂದ ಮುಖ ಗುರುತಿಸುವಿಕೆ ತಂತ್ರಜ್ಞಾನ (Facial Recognition -FRT)ವನ್ನು ಪ್ರಾಯೋಗಿಕ ಆಧಾರದ ಮೇಲೆ ಜಾರಿಗೆ ತರಲು ನಿರ್ಧರಿಸಿದೆ.ಟೋಕನ್ ರಹಿತ ದರ್ಶನ ಮತ್ತು ವಸತಿ ಹಂಚಿಕೆ ವ್ಯವಸ್ಥೆಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವುದು, ಭೇಟಿ ನೀಡುವ ಬಹುಸಂಖ್ಯೆಯ ಯಾತ್ರಾರ್ಥಿಗಳಿಗೆ ಹೆಚ್ಚು ಪರಿಣಾಮಕಾರಿ ಸೇವೆಗಳನ್ನು ಒದಗಿಸುವುದು FRT […]

Advertisement

Wordpress Social Share Plugin powered by Ultimatelysocial