ರಾಜ್ಯ ಸರ್ಕಾರ 2023 ರಲ್ಲಿ ಮಂಡಿಸುವ ಬಜೆಟ್ಗೆ ರಾಜ್ಯದ ರೈತರ ಒತ್ತಾಯಗಳು

ರಾಜ್ಯ ಸರ್ಕಾರ 2023 ರಲ್ಲಿ ಮಂಡಿಸುವ ಬಜೆಟ್ಗೆ ರಾಜ್ಯದ ರೈತರ ಒತ್ತಾಯಗಳು
ತೆಲಂಗಾಣ ರಾಜ್ಯದಲ್ಲಿ ರಾಜ್ಯ ಸರ್ಕಾರವೇ ಪ್ರತಿಯೊಬ್ಬರಿಗೂ 5 ಲಕ್ಷ ಜೀವ ವಿಮೆ ಪಾಲಿಸಿ ನೀಡಲಾಗಿದೆ ಆಕಸ್ಮಿಕ, ಅಪಘಾತ ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಸಿಗುತ್ತದೆ ಇದೇ ರೀತಿ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತರಬೇಕು

ರೈತರ ಎಲ್ಲ ಕೃಷಿ ಉತ್ಪನ್ನಗಳು ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಪಂಜಾಬ್ , ಹರಿಯಾಣ,ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ತೆರೆಯಬೇಕು ರೈತರಿಂದ ಖರೀದಿಸುವ ಖರೀದಿ ಮಿತಿಯನ್ನ ರದ್ದುಗೊಳಿಸಬೇಕು ಮೇಲಿನ ರಾಜ್ಯಗಳಲ್ಲಿ ಇರುವಂತೆ ಜಾರಿ ಮಾಡಬೇಕು

ರೈತರು ಬೆಳೆದ ಎಲ್ಲಾ ಪೌಷ್ಟಿಕ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವಂಥ ವ್ಯವಸ್ಥೆ ಜಾರಿಗೆ ಬರಬೇಕು, ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ ವಿದ್ಯಾರ್ಥಿ ನಿಲಯ, ಜೈಲುಗಳಿಗೆ, ಪೂರೈಸುವ ವ್ಯವಸ್ಥೆ ಮಾಡಬೇಕು

ಎಲ್ಲಾ ಕೃಷಿ ಉತ್ಪಾದನಾ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು, ಬೆಳೆವಿಮೆ ಪದ್ದತಿ ಕೆಲವು ನೀತಿಗಳು ಬದಲಾಗಬೇಕು

ಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ಪರಿಹಾರ ವೈಜ್ಞಾನಿಕವಾಗಿ ಸಂಪೂರ್ಣ ನಷ್ಟ ಸಿಗುವಂತಾಗಬೇಕು ,

ಕೃಷಿ ಸಾಲ ನೀತಿ ಬದಲಾಗಬೇಕು,ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು ಎಲ್ಲಾ ರೈತರಿಗೂ ಬರಿ ಪಹಣಿ ಪತ್ರ ಆಧರಿಸಿ ಕನಿಷ್ಠ 3 ಲಕ್ಷ ಆಧಾರರಹಿತ ಬಡ್ಡಿಇಲ್ಲದ ಸಾಲ ಕೊಡಿಸುವ ಯೋಜನೆ ಎಲ್ಲ ಬ್ಯಾಂಕುಗಳಲ್ಲಿ ಜಾರಿಯಾಗಬೇಕು ,

ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಮೇಳಗಳನ್ನು ಅಂತರರಾಷ್ಟ್ರೀಯ ವಿಶ್ವ ರೈತರ ದಿನದಂದು, ಡಿಸೆಂಬರ್ 23ರಂದು,
ದಿವಂಗತ ಎಂ ಡಿ,ಎನ್ ಹೆಸರಿನಲ್ಲಿ ರೈತರ ಹಬ್ಬದ ರೀತಿ ಆಚರಿಸಲು ಕ್ರಮ ಕೈಗೊಳ್ಳಬೇಕು

ಕಬ್ಬಿನ ಎಫ್ ಆರ್ ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು.

ಸಕ್ಕರೆ ಕಾರ್ಖಾನೆಗಳ ಹಾಗೂ ಕಟೌವ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ಆರ್‌ಇಜಿ ಯೋಜನೆಯ ಕಬ್ಬು ಕಟಾವು ಹಾಗೂ ಬಿತ್ತನೆಗೆ ಬಳಸಿಕೊಳ್ಳಲು ಯೋಜನೆಗೆ ಸೇರಿಸಬೇಕು ಬಾಳೆ ಬೆಳೆಗೆ ಪ್ರೋತ್ಸಾಹ ಧನ ನೀಡುವ ರೀತಿ

ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು ಇಳುವರಿ ಮೋಸ ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು

ಕಬ್ಬಿನ ಎಥನಾಲ್ ಉತ್ಪಾದನಾ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು .
ಕಬ್ಬಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ,ಬೆಂಕಿ ಅನಾಹುತವಾದಾಗ ಸುಟ್ಟು ಹೋದ ಕಬ್ಬಿಗೆ ಯಾವುದೇ ಮಾನದಂಡವಿಲ್ಲದೆ ಕಾರ್ಖಾನೆಗಳು ಕಬ್ಬಿನ ಹಣದಲ್ಲಿ ಶೇಕಡ 25ರಷ್ಟು ಕಟಾವು ಮಾಡುವುದನ್ನು ತಪ್ಪಿಸಬೇಕು. ಎಫ್ ಆರ್ ಪಿ ಪೂರ್ಣ ಹಣ ರೈತರಿಗೆ ಪಾವತಿ ಆಗಬೇಕು ,

ಕೃಷಿ ಉತ್ಪನ್ನಗಳಿಗೆ ಎಪಿಎಂಸಿ ಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು

ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿ ಎಸ್ಟಿ ತೆರಿಗೆ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು. ,
ಕಾಡಂಚಿನ ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆಗಳು ರೈತರ ಜೀವನ ನಾಶವಾಗುತ್ತಿರುವುದನ್ನು ತಪ್ಪಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಪರಿಹಾರ ಮನದಂಡ ಹೆಚ್ಚಳ ಮಾಡಬೇಕು

ಕೃಷಿ ಜಮೀನು ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು, ಅವಶ್ಯಕತೆ ಸಂದರ್ಭದಲ್ಲಿ ರೈತರನ್ನ ಪಾಲುದಾರರನ್ನಾಗಿ ಮಾಡಬೇಕು

ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ತಿಂಗಳಿಗೊಮ್ಮೆ ರೈತರ ಸಭೆ ನಡೆಸಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕುತ್ತದೆ ಈ ಬಗ್ಗೆ ಸರ್ಕಾರ ಕಠಿಣ ಸೂಚನೆ ನೀಡಿ

ಮೇಲ್ಕಂಡ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ಬಜೆಟ್ ಮಂಡನೆಯಲ್ಲಿ ಕ್ರಮಕೈಗೊಳ್ಳಬೇಕು, ರೈತರ ಅಭಿವೃದ್ಧಿ ಪೂರ್ವಕವಾದ ಯೋಜನೆಗಳನ್ನು ಜಾರಿಗೆ ತರಬೇಕು, ಎಂದು ಒತ್ತಾಯಿಸುತ್ತೇನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಾಣಿಗಳಿಗಾಗಿ ಆಂಬ್ಯುಲೆನ್ಸ್ ಸೇವೆ ಆರಂಭಿಸಿದ ನಟಿ

Sat Feb 11 , 2023
    ಬೆಂಗಳೂರು, ಫೆಬ್ರವರಿ 11: ಬೆಂಗಳೂರಿನ ಪ್ರಾಣಾ ಅನಿಮಲ್ ಫೌಂಡೇಶನ್‌ 24/7 ಆಂಬ್ಯುಲೆನ್ಸ್ ಸೇವೆ ಮತ್ತು ಸಹಾಯವಾಣಿಯನ್ನು ಪ್ರಾರಂಭಿಸುತ್ತಿದೆ. ಅದು ಗಾಯಗೊಂಡ ಇಲ್ಲವೇ ತಕ್ಷಣದ ನೆರವಿನ ಅಗತ್ಯವಿರುವ ಪ್ರಾಣಿಗಳಿಗೆ ಆಂಬ್ಯುಲೆನ್ಸ್‌ ಸೇವೆಯನ್ನು ಒದಗಿಸುತ್ತದೆ. ಪ್ರಾಣಾ ಅನಿಮಲ್ ಫೌಂಡೇಶನ್‌ ನಗರದಲ್ಲಿ ಆಂಬ್ಯುಲೆನ್ಸ್‌ಗಳ ಕೊರತೆ ಮತ್ತು ಪ್ರಾಣಿಗಳಿಗೆ ಸರಿಯಾದ ಚಿಕಿತ್ಸಾ ಸೌಲಭ್ಯಗಳನ್ನು ಪರಿಗಣಿಸಿ ಸೇವೆಗಳನ್ನು ಪ್ರಾರಂಭಿಸಲಾಗುತ್ತಿದೆ. ಹೆಚ್ಚಿನ ಸಂರಕ್ಷಣಾ ಕೇಂದ್ರಗಳು ಮತ್ತು ಮನೆಗಳು ಉತ್ತರ ಹಾಗೂ ಪೂರ್ವ ಬೆಂಗಳೂರಿನಲ್ಲಿ ನೆಲೆಗೊಂಡಿವೆ. ತುರ್ತು […]

Advertisement

Wordpress Social Share Plugin powered by Ultimatelysocial