ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ ಧ್ವಂಸ:

ಮೆಲ್ಬರ್ನ್‌: ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆಯುವುದು ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಕಳೆದ ತಿಂಗಳಿಂದ ಇಲ್ಲಿಯವರೆಗೆ, ಇಲ್ಲಿನ ಸ್ವಾಮಿನಾರಾಯಣ ಹಾಗೂ ಇಸ್ಕಾನ್‌ ದೇವಸ್ಥಾನ, ಕಾರಂ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ-ವಿಷ್ಣು ದೇವಸ್ಥಾನಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದು, ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ.

‘ಭಾರತ ವಿರೋಧಿ ಭಯೋತ್ಪಾದಕರನ್ನು ವೈಭವೀಕರಿಸಿ, ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡುವುದನ್ನು ನಿರ್ಭೀಡೆಯಿಂದ, ಪದೇ ಪದೇ ಮಾಡಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇದು ಎಚ್ಚರಿಕೆ ಗಂಟೆಯಾಗಿದೆ’ ಎಂದು ಕ್ಯಾನ್‌ಬೆರಾದಲ್ಲಿರುವ ಭಾರತದ ರಾಯಭಾರ ಕಚೇರಿಯು ಗುರುವಾರ ಹೇಳಿಕೆ ಬಿಡುಗಡೆ ಮಾಡಿದೆ.

‘ಆಸ್ಟ್ರೇಲಿಯಾದಲ್ಲಿ ಖಾಲಿಸ್ತಾನಿ ಬೆಂಬಲಿಗರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸಿಖ್ಸ್‌ ಫಾರ್‌ ಜಸ್ಟೀಸ್‌ (ಎಸ್‌ಎಫ್‌ಜೆ) ಎನ್ನುವ ನಿಷೇಧಿತ ಭಯೋತ್ಪಾದನಾ ಸಂಸ್ಥೆ ಹಾಗೂ ಆಸ್ಟ್ರೇಲಿಯಾದ ಹೊರಗೆ ಇರುವ ಇಂಥ ಸಂಸ್ಥೆಗಳು ಈ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿವೆ’ ಎಂದು ಭಾರತ ಆರೋಪಿಸಿದೆ.

‘ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸುತ್ತಿರುವ ಘಟನೆಗಳಿಂದ ಆಘಾತವಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ’ ಎಂದು ಭಾರತದಲ್ಲಿರುವ ಆಸ್ಟ್ರೇಲಿಯಾದ ರಾಯಭಾರ ಕಚೇರಿಯು ಹೇಳಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಣರಾಜ್ಯೋತ್ಸವ ಮುಗಿದು 24 ಗಂಟೆಗಳಾದರೂ ಧ್ವಜವನ್ನು ತೆರವುಗೊಳಿಸದ ಶಿಕ್ಷಕ.

Fri Jan 27 , 2023
ಜನೆವರಿ 26 ರಂದು 74ನೇ ಗಣರಾಜ್ಯೋತ್ಸವದ ಅಂಗವಾಗಿ ನಿನ್ನೆ ದಿನ ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಟ್ಟಡಗಳ ಮೇಲೆ ಧ್ವಜಾರೋಹಣ ಮಾಡಲಾಗಿತ್ತು. ಆದರೆ ಇಲ್ಲೊಬ್ಬ ಶಿಕ್ಷಕ ಎರಡು ದಿನಗಳಾದರೂ ಧ್ವಜವನ್ನು ತೆರವುಗೊಳಿಸದೇ ಕರ್ತವ್ಯ ಲೋಪ ಎಸಗಿದ ಆರೋಪದ ಕೇಳಿ ಬಂದಿದೆ. ಸುರಪುರ ತಾಲ್ಲೂಕಿನ ಕೇ. ತಳ್ಳಳ್ಳಿ ಗ್ರಾಮದ ಹೊರವಲಯದಲ್ಲಿರುವ ವಲಯದಲ್ಲಿರುವ ಬೆಂಚಿ ಶಾಲೆಯಲ್ಲಿ ಎರಡು ದಿನಗಳಾದರೂ ರಾಷ್ಟ್ರ ಧ್ವಜ ಹಾರಾಡುತ್ತಿದೆ ಇದನ್ನು ಕಂಡ ದೇಶಾಭಿಮಾನಿಗಳು ವಿಡಿಯೊ ವೊಂದನ್ನು ಮಾಡಿ […]

Advertisement

Wordpress Social Share Plugin powered by Ultimatelysocial