ಹೆಚ್.ಡಿ.ದೇವೇಗೌಡ ನಾನು ಸುಮ್ಮನಿರಲ್ಲ, ಜೆಡಿಎಸ್ ಸಾಮರ್ಥ್ಯ ಸಾಬೀತು ಪಡಿಸುತ್ತೇನೆ :

ಬೆಂಗಳೂರು, ಜು.1- ನಮ್ಮ ಪಕ್ಷವನ್ನು ಯಾರು ತುಳಿಯಬೇಕು ಎಂದು ಪ್ರಯತ್ನ ಮಾಡಿದ್ದರೋ ಅವರ ವಿರುದ್ಧ ಶತಾಯ ಗತಾಯ ಹೋರಾಟ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಜೆಪಿ ಭವನದಲ್ಲಿಂದು ಜನತಾಮಿತ್ರ ಜನ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸುಮ್ಮನೆ ಕೂರುವುದಿಲ್ಲ.

ಕೂರಲು ಏಳಲು ಆಗುವುದಿಲ್ಲ ಎಂದು ಹಾಸ್ಯ ಮಾಡುವರಿಗೆ ನಾನು ಹೋರಾಟದ ಮೂಲಕ ಉತ್ತರ ಕೊಡುತ್ತೇನೆ ಎಂದರು.

ಮೊದಲು ಜಲಧಾರೆ ಕಾರ್ಯಕ್ರಮ ಆಯಿತು. ಈಗ ಜನಮಿತ್ರ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿಗೆ ಏನೇನು ಮಾಡಿದ್ದೇನೆ ಎಂಬುದನ್ನು ಹೇಳುವ ಕಾಲ ಬರುತ್ತದೆ. ಈ ದೇವೇಗೌಡ ಹಳ್ಳಿ ರೈತನ ಮಗ. ಕೆಲವರು ಏನು ಮಾಡಲು ಆಗುತ್ತದೆ ಎಂದು ಕುಹಕವಾಡಿದ್ದಾರೆ. ನಮ್ಮ ಪಕ್ಷಕ್ಕೆ ಶಕ್ತಿ ಇಲ್ಲ ಅಂತಾ ಅಪಹಾಸ್ಯ ಮಾಡುತ್ತಾರೆ.ನಮ್ಮ ಶಕ್ತಿ ಏನು ಅನ್ನೋದನ್ನು ಸಾಬೀತುಪಡಿಸುತ್ತೇನೆ ಸವಾಲು ಹಾಕಿದರು.

ಈ ಭಾರಿ ನಮಗೆ ದೈವಿ ಶಕ್ತಿ ಇದೆ. ಪಕ್ಷದ ಪ್ರತಿಯೊಬ್ಬರೂ ಹೋರಾಟದ ಕೆಚ್ಚಿನಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಹೋರಾದ ಮೇಲೆ ಶಕ್ತಿ ಇದೆ. ಇದನ್ನು ನಾನು ಮಾಡುತ್ತೇನೆ. ಹೋರಾಟಕ್ಕೆ ಸಿದ್ದರಾಗಿ ನಿಲ್ಲಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಇದಕ್ಕೂ ಮುನ್ನ ಜೆಪಿಭವನದಲ್ಲಿ ಜಲಧಾರೆಯ ಮಹಾಕಳಸಕ್ಕೆ ಪೂಜೆ ಹಾಗೂ ಗಂಗಾಪೂಜೆಯನ್ನು ಪುರೋಹಿತರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಶಾಸಕರಾದ ಆರ್. ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ, ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಗೇಜ್‍ನಲ್ಲಿ ಬಾಂಬ್ ಇದೆ ಎಂದು ಹೇಳಿ ಸಿಬ್ಬಂದಿಗಳನ್ನು ಆತಂಕಕ್ಕೆ ದೂಡಿದ ಘಟನೆ

Tue Jul 5 , 2022
ಕೊಚ್ಚಿ .ಜು.3- ಮುಂಜಾನೆ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ದಂಪತಿ ತಮ್ಮ ಲಗೇಜ್‍ನಲ್ಲಿ ಬಾಂಬ್ ಇದೆ ಎಂದು ಹೇಳಿ ಸಿಬ್ಬಂದಿಗಳನ್ನು ಆತಂಕಕ್ಕೆ ದೂಡಿದ ಘಟನೆ ನಡೆದಿದೆ. ಹಿರಿಯ ನಾಗರೀಕ ವ್ಯಕ್ತಿ ಮತ್ತು ಅವರ ಪತ್ನಿ ವಿದೇಶಕ್ಕೆ ತೆರಳಬೇಕಿದ್ದ ಕಾರಣ ಮುಂಜಾನೆ 1.30ರ ಸುಮಾರಿಗೆ ವಿಮಾನ ನಿಲ್ದಾಣ ತಲುಪಿದ್ದಾರೆ. ಚೆಕ-ಇನ್ ಕೌಂಟರ್‍ನಲ್ಲಿ ವಿಮಾನ ಸಿಬ್ಬಂದಿ ಹಲವು ಪ್ರಶ್ನೆ ಕೇಳಿದ್ದಾರೆ ಇದು ಅವರ ಸಿಟ್ಟಿಗೆ ಕಾರಣವಾಗಿದೆ, ಪದೆ ಪದೆ ತಮ್ಮ ಲಗೇಜ್‍ನಲ್ಲಿ […]

Advertisement

Wordpress Social Share Plugin powered by Ultimatelysocial