ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಕ್ಷೇತ್ರ ಪರಸ್ಪರ ಸಂಪರ್ಕದಿಂದ ಅಭಿವೃದ್ಧಿ ಸಾಧ್ಯ.

 

ಬೆಳಗಾವಿಯಿಂದ ಇಂದು ಇಡೀ ದೇಶದ ರೈತರಿಗೆ 13ನೇ ಕಂತಿನ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿರುತ್ತದೆ. ಯಾವುದೇ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.ನಗರದ ಮಾಲಿನಿ ಸಿಟಿ ಮೈದಾನದಲ್ಲಿ ರೇಲ್ವೆ ಹಾಗೂ ಜಲಜೀವನ್ ಮಿಷನ್ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13 ನೇ ಕಂತಿನ ಸುಮಾರು 16 ಸಾವಿರ ಕೋಟಿ ರೂ.ಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಿ ಮಾತನಾಡಿದರು.ರಾಜ್ಯದಲ್ಲಿ ಸ್ಟಾರ್ಟ್ ಅಪ್ ಗಳ ಚರ್ಚೆಯಾಗುತ್ತಿದೆ. ಬೆಳಗಾವಿಯಲ್ಲಿ ನೂರು ವರ್ಷಗಳ ಹಿಂದೆಯೇ ಸ್ಟಾರ್ಟ್ ಅಪ್ ಆರಂಭಗೊಂಡಿತ್ತು. ಅಂದು ಬೆಳಗಾವಿಯಲ್ಲಿ ಬಾಬುರಾವ್ ಪುಸಾಳ್ಕರ್ ಸಣ್ಣ ಔದ್ಯೋಗಿಕ ಘಟಕ ಪ್ರಾರಂಭಿಸಿದ್ದರು, ಅದು ಕೈಗಾರಿಕಾ ರಂಗದ ಬೆಳವಣಿಗೆಗೆ ಕಾರಣವಾಗಿದೆ ಎಂದರು.ಕೃಷಿಯನ್ನು ಆಧುನಿಕತೆಯೊಂದಿಗೆ ಜೋಡಿಸಿ ಭವಿಷ್ಯತ್ತಿನ ಅವಶ್ಯಕತೆ ಪೂರ್ಣಗೊಳಿಸಲಾಗುವುದು.2014 ರಲ್ಲಿ ಕೃಷಿಗೆ ಮೀಸಲಿಟ್ಟ ಬಜೆಟ್ ಕೇವಲ 25 ಸಾವಿರ ಕೋಟಿ ಇತ್ತು. ಈ ವರ್ಷ ನಮ್ಮ ಸರಕಾರದ ಬಜೆಟ್ ನಲ್ಲಿ 1.25 ಲಕ್ಷ ಕೋಟಿ ಮೀಸಲಿಡಲಾಗಿದೆ. ನಮ್ಮ ಸರಕಾರವು ರೈತರನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಜತೆ ಜೋಡಿಸುವ ಕೆಲಸ ನಿರಂತರವಾಗಿ ನಡೆಸುತ್ತಿದೆ ಎಂದರು.ಸಾವಯವ ಕೃಷಿಗೆ ಒತ್ತು ನೀಡಲಾಗುತ್ತಿದೆ. ಇದಲ್ಲದೇ “ಪಿಎಂ- ಪ್ರಣಾಮ್ ಯೋಜನೆ”ಯಡಿ ರಾಸಾಯನಿಕ ಮುಕ್ತ ಕೃಷಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.ಪಾರಂಪರಿಕ ಕೃಷಿ ಪದ್ಧತಿಯನ್ನು ನಾವು ಇಂದು ಅಳವಡಿಸಿಕೊಳ್ಳಬೇಕಿದೆ. ಸಿರಿಧಾನ್ಯ‌ ಬೆಳೆಗಳಿಗೆ ಸಿರಿಅನ್ನ ಯೋಜನೆ ಮೂಲಕ ಪ್ರೋತ್ಸಾಹ ನೀಡಲಾಗುತ್ತಿದೆ.ಕರ್ನಾಟಕವು ಸಿರಿಧಾನ್ಯಗಳ ತವರು ಭೂಮಿಯಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಸಿರಿಧಾನ್ಯ ಹಾಗೂ ಸಾವಯವ ಕೃಷಿಗೆ ಪ್ರೋತ್ಸಾಹ ನೀಡಿದ್ದರು ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಐಮ್ಯಾಕ್ಸ್​ 3ಡಿ ರೂಪದಲ್ಲಿ ಬರಲಿದೆ 'ಭೋಲಾ' ಟ್ರೇಲರ್​;

Wed Mar 1 , 2023
ಮಾರ್ಚ್​ 6ರಂದು ಮುಂಬೈನಲ್ಲಿ ಅದ್ದೂರಿ ಇವೆಂಟ್​ ಮಾಡಿ ‘ಭೋಲಾ’ ಟ್ರೇಲರ್ ಅನಾವರಣಗೊಳಿಸಲಾಗುವುದು. ಆ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.ಅಜಯ್​ ದೇವಗನ್​ನಟಿಸಿದ್ದ 5 ಸಿನಿಮಾಗಳು 2022ರಲ್ಲಿ ತೆರೆ ಕಂಡಿದ್ದವು. 2023ರಲ್ಲಿ ಅವರ ನಟನೆಯ ಮೊದಲ ಸಿನಿಮಾಈಗ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್​ 30ರಂದು ಈ ಚಿತ್ರ ತೆರೆಕಾಣಲಿದೆ. ವಿಶೇಷ ಏನೆಂದರೆ ಈ ಸಿನಿಮಾ 3ಡಿಯಲ್ಲಿ ಮೂಡಿಬರುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಭೋಲಾ’ ಚಿತ್ರದ ಟ್ರೇಲರ್ಅನಾವರಣ ಆಗಲಿದೆ. ಐಮ್ಯಾಕ್ಸ್​ 3ಡಿ ರೂಪದಲ್ಲಿ ಟ್ರೇಲರ್​ ಬಿಡುಗಡೆ […]

Advertisement

Wordpress Social Share Plugin powered by Ultimatelysocial