ಡಿ.19 ರಂದು ದೇಶದ ಪ್ರಮುಖ ನಗರದಲ್ಲಿ ಚಿನ್ನದ ಬೆಲೆ ಹೇಗಿದೆ?

ಡಿ.19 ರಂದು ದೇಶದ ಪ್ರಮುಖ ನಗರದಲ್ಲಿ ಚಿನ್ನದ ಬೆಲೆ ಹೇಗಿದೆ?

ಡಿಸೆಂಬರ್ 19 ರಂದು ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯು ಏರಿಳಿತ ಕಂಡಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,680 ರೂ ಇದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 48,680 ರೂ ಆಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಹತ್ತು ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಹತ್ತು ರೂಪಾಯಿ ಏರಿಕೆ ಕಂಡಿದೆ.

ಆದರೆ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯು ಏರಿಳಿತ ಕಂಡಿದೆ. ಬೆಳ್ಳಿ ಬೆಲೆಯು ಇಂದು ಸ್ಥಿರವಾಗಿದೆ. ಬೆಳ್ಳಿಯ ಬೆಲೆಯು 1 ಕೆ.ಜಿ ಗೆ 62,200 ರೂ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,700ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,850 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,680 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,680 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,850 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,200 ರೂ. ಇದೆ. ಚೆನ್ನೈನಲ್ಲಿ 45,940 ರೂ. ಹಾಗೂ ಅಪರಂಜಿ ಚಿನ್ನಕ್ಕೆ 50,120 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 47,850 ಹಾಗೂ 50,550 ರು ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ

Mon Dec 20 , 2021
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು,ಶಾಸಕ ಎನ್.ಮಹೇಶ್ ಹಾಗೂ ನಿಲುಮೆ ಪ್ರತಿಷ್ಠಾನದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like […]

Advertisement

Wordpress Social Share Plugin powered by Ultimatelysocial