‘ಧರಣಿ ಮಂಡಲ ಮಧ್ಯದೊಳಗೆ’ ಟ್ರೇಲರ್ ರಿಲೀಸ್ – ಚಿತ್ರ್ಕಕೆ ಹ್ಯಾಟ್ರಿಕ್ ಹೀರೋ, ವಸಿಷ್ಠ ಸಿಂಹ ಸಾಥ್!

ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಟ್ರೇಲರ್ ಹೊತ್ತು ಬಂದ ಸಿನಿಮಾ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.ಸಿನಿಮಾದ ಕ್ಯೂರಿಯಾಸಿಟಿ ಹೊತ್ತ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಲ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ನಟಿಸಿರುವ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ.ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ರು.ಚಿತ್ರದ ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದ್ರು.ಗುಳ್ಟು ನಂತರ ಕೇಳಿದ ಇಂಟ್ರಸ್ಟಿಂಗ್ ಸಬ್ಜೆಕ್ಟ್ ಇರುವ ಕಥೆ ಇದಾಗಿದೆ. ಚಿತ್ರದಲ್ಲಿ ಆದಿ ಪಾತ್ರವನ್ನು ನಿರ್ವಹಿಸಿದ್ದೇನೆ. ಬಾಕ್ಸಿಂಗ್ ನಲ್ಲಿ ಸಾಧನೆ ಮಾಡಬೇಕು ಎಂದುಕೊಂಡಿರುವ ಹುಡುಗನ ಪಾತ್ರ. ಗುಳ್ಟು ಸಿನಿಮಾಗಿಂತ ಡಿಫ್ರೆಂಟ್ ಆದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ನಾಯಕ ನಟ ನವೀನ್ ಶಂಕರ್ ತಿಳಿಸಿದ್ರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೋಲಾರ : ಶಾಲಾ ಮಕ್ಕಳ ಬಿಸಿ ಊಟದಲ್ಲಿ ರಾಶಿ ರಾಶಿ ಹುಳ,

Sat Nov 26 , 2022
ಶಾಲಾ ಮಕ್ಕಳ ಬಿಸಿ ಊಟದಲ್ಲಿ ರಾಶಿ ರಾಶಿ ಹುಳ, ಹುಳ ಬಿದ್ದಿರೋ ಅನ್ನವನೇ ಸೇವಿಸುತ್ತಿರುವ ಸರ್ಕಾರಿ ಶಾಲೆಯ ಮಕ್ಕಳು, ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಪೆಗಳಪಲ್ಲಿ ಗ್ರಾಮದ ಶಾಲೆ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹುಳ ಬಿದ್ದಿರೋ ಅಕ್ಕಿಯಿಂದ ಅನ್ನ, ಮುಖ್ಯ ಶಿಕ್ಷಕಿ ಉಮಾದೇವಿ ಬೇಜವಾಬ್ದಾರಿಯಿಂದ ಮಕ್ಕಳ ಜೀವದ ಜೊತೆ ಚೆಲ್ಲಾಟ, ಕಳೆದ ಮೂರು ದಿನಗಳಿಂದ ಹುಳ ಇರುವ ಅನ್ನವನ್ನೇ ಸೇವಿಸುತ್ತಿರುವ ಮಕ್ಕಳು, ವಿಚಾರ ತಿಳಿದ ಮಕ್ಕಳ […]

Advertisement

Wordpress Social Share Plugin powered by Ultimatelysocial