ಧಾರವಾಡ ಅವಳಿನಗರಕ್ಕೆ ಬರುತ್ತಿದೆ ವಂದೇ ಭಾರತ ರೈಲು: ಕಾರ್ಯಾಚರಣೆ ಚುರುಕು..!

 

ಭಾರತೀಯ ರೈಲ್ವೆ ವಲಯದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವುದರ ಜೊತೆಗೆ ಸಮಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಹಲವಾರು ಯೋಜನೆ ಜಾರಿಗೆ ತರುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಜನರು ಕಾತರದಿಂದ ಕಾಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಎಂಟು ಕೋಚ್ ಗಳನ್ನು ಜೋಡಿಸುವ ಬಗ್ಗೆ ಚಿಂತನೆ ನಡೆದಿದೆ.ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್. ಬೆಂಗಳೂರಿಂದ ಹೊರಡುವ ರೈಲು ಹುಬ್ಬಳ್ಳಿ ಮೂಲಕ ಧಾರವಾಡ ತಲುಪಲಿದೆ. ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ತಿಂಗಳಿನಲ್ಲಿ ಈ ರೈಲು ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಓಡಿಸಲು ಅಗತ್ಯವಾಗಿರುವ ಕಾಮಗಾರಿಗಳನ್ನು ನೈಋತ್ಯ ರೈಲ್ವೆ ವಲಯ ಕೈಗೊಂಡಿದೆ. ಅಲ್ಲದೇ ರೈಲಿನ ತಾತ್ಕಾಲಿಕ ವೇಳಾಪಟ್ಟಿಯನ್ನು ಭಾರತೀಯ ರೈಲ್ವೆ ಮಂಡಳಿಗೆ ಈಗಾಗಲೇ ಹುಬ್ಬಳ್ಳಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ನೈಋತ್ಯ ರೈಲ್ವೆ ಸಲ್ಲಿಕೆ ಮಾಡಿದೆ.ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ತಮಿಳುನಾಡಿನ ಚೆನ್ನೈನ ಪೆರಂಬೂರ್‌ನ ಸಮಗ್ರ ಕೋಚ್ ಫ್ಯಾಕ್ಟರಿಯಲ್ಲಿ ದೇಶೀಯವಾಗಿ ಉತ್ಪಾದಿಸಲಾಗುತ್ತಿದೆ. ವಂದೇ ಭಾರತ್ 2.0 ಮಾದರಿಯ ರೈಲನ್ನು ಈಗ ಓಡಿಸಲಾಗುತ್ತಿದ್ದು, ಸದ್ಯ ದೇಶದಲ್ಲಿ 8 ವಂದೇ ಭಾರತ್ ರೈಲುಗಳು ಸಂಚಾರ ನಡೆಸುತ್ತಿವೆ.ಭಾರತೀಯ ರೈಲ್ವೆಯು ಮಿನಿ ವಂದೇ ಭಾರತ್ ರೈಲಿನ ಪರಿಕಲ್ಪನೆಯನ್ನು ಸಿದ್ಧಪಡಿಸಿದೆ. ದೂರದ ನಗರಗಳಿಗೆ ಸಂಚಾರ ನಡೆಸುವ ವಂದೇ ಭಾರತ್ ರೈಲುಗಳಿಗೆ 16 ಕೋಚ್, ಕಡಿಮೆ ದೂರದ ನಗರಗಳನ್ನು ಸಂಪರ್ಕಿಸುವ ರೈಲಿಗೆ 8 ಕೋಚ್‌ಗಳನ್ನು ಅಳವಡಿಕೆ ಮಾಡಲಾಗುತ್ತದೆ. ಪ್ರಯಾಣದ ಅವಧಿಯ ಆಧಾರದ ಮೇಲೆ ಎಷ್ಟು ಕೋಚ್ ಇರಬೇಕು ಎಂದು ರೈಲ್ವೆ ತೀರ್ಮಾನ ಕೈಗೊಳ್ಳಲಿದೆ.ಸದ್ಯದ ಮಾಹಿತಿ ಪ್ರಕಾರ ಬೆಂಗಳೂರು‌,‌ ಹುಬ್ಬಳ್ಳಿ-ಧಾರವಾಡ ನಡುವೆ ಸಂಚಾರ ನಡೆಸುವ ರೈಲಿಗೆ 8 ಬೋಗಿ ಆಳವಡಿಕೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾದರೆ ಬೋಗಿಗಳ ಸಂಖ್ಯೆ ಜಾಸ್ತಿ ಮಾಡಲು ಸಹ ಅವಕಾಶವಿದೆ. ಬೆಂಗಳೂರು-ಹುಬ್ಬಳ್ಳಿ-ಧಾರವಾಡ ನಡುವಿನ ವಂದೇ ಭಾರತ್ ರೈಲು ಸಂಚಾರದ ಅವಧಿ 5 ಗಂಟೆಗಳು. ಹುಬ್ಬಳ್ಳಿ-ಧಾರವಾಡ ರೈಲ್ವೇ ಮಾರ್ಗದಲ್ಲಿ ಈಗಾಗಲೇ ರೈಲಿನ ವೇಗದ ಪರೀಕ್ಷೆ ಯಶಸ್ವಿಯಾಗಿದೆ. ವಂದೇ ಭಾರತ್ ರೈಲು ಸಂಚಾರಕ್ಕೆ ಪೂರಕವಾಗಿ ಹಳಿಗಳನ್ನು ಉನ್ನತೀಕರಿಸಲಾಗಿದ್ದು, ಗಂಟೆಗೆ 120 ಕಿ. ಮೀ. ವೇಗಕ್ಕೆ ಅನುಗುಣವಾಗಿ ಹಳಿ ನಿರ್ಮಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಣರಾಜ್ಯೋತ್ಸವ ದಿನದಂದು ಕರೆಂಟ್ ಶಾಕ್;

Fri Jan 27 , 2023
ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲು ಮುಂದಾದ ವ್ಯಕ್ತಿಯೊಬ್ಬರಿಗೆ ಹೈ ವೋಲ್ಟೇಜ್ ಕರೆಂಟ್ ತಗುಲಿದ ಪರಿಣಾಮ ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೀತಾಮಾರಿ ಜಿಲ್ಲೆ ರಾಮ್ ನಗರದಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ನಡೆಸುವ ಅಭಿಷೇಕ್ ಜಾ ಮೃತಪಟ್ಟ ವ್ಯಕ್ತಿಯಾಗಿದ್ದು, ಪ್ರತಿವರ್ಷದಂತೆ ಈ ವರ್ಷವೂ ಅವರು ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಲು ಮುಂದಾಗಿದ್ದರು. ಈ ವೇಳೆ ರಾಷ್ಟ್ರಧ್ವಜ ಕಟ್ಟಿದ್ದ ಕಬ್ಬಿಣದ ಪೈಪ್‍ಗೆ 11 ಸಾವಿರ ವೋಲ್ಟ್ ವಿದ್ಯುತ್ ಪ್ರವಹಿಸುತ್ತಿದ್ದ […]

Advertisement

Wordpress Social Share Plugin powered by Ultimatelysocial