ಮಾಜಿ ಯೋಧರ ಅವಲಂಬಿತರಲ್ಲಿ ಗಂಡು, ಹೆಣ್ಣು ತಾರತಮ್ಯ; ಹೈಕೋರ್ಟ್ ಕಿಡಿ.

ಬೆಂಗಳೂರು, ಜನವರಿ 04; ಮಾಜಿ ಯೋಧರ ಅವಲಂಬಿತರಿಗೆ ನೀಡುವ ಗುರುತಿನ ಚೀಟಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ತಾರತಮ್ಯ ಮಾಡುತ್ತಿರುವುದಕ್ಕೆಹೈಕೋರ್ಟ್ ಕಿಡಿ ಕಾರಿದೆ.ಅಲ್ಲದೇ, ಆ ಕುರಿತು ನಿಯಮ ಸಂವಿಧಾನಬಾಹಿರೆವೆಂದು ಆದೇಶ ನೀಡಿರುವುದಲ್ಲದೆ, ಆ ನಿಯಮವನ್ನು ತಿದ್ದುಪಡಿ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಮೈಸೂರಿನ ಮಾಜಿ ಯೋಧರ ಪುತ್ರಿ ಪ್ರಿಯಾಂಕ ಆರ್‌. ಪಾಟೀಲ್‌ ತಮಗೆ ಗುರುತಿನ ಚೀಟಿ ನೀಡಲು ನಿರಾಕರಿಸಿದ್ದ ಸೈನಿಕ ಕಲ್ಯಾಣ ಇಲಾಖೆಯ ಕ್ರಮ ಪ್ರಶ್ನಿಸಿದ್ದರು. ಆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.ಜತೆಗೆ ಅರ್ಜಿದಾರರಿಗೆ ಗುರುತಿನ ಚೀಟಿ ವಿತರಿಸುವಂತೆ ನಿರ್ದೇಶನ ನೀಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆ ಚೀಟಿ ಆಧರಿಸಿ ಸಹಾಯಕ ಪ್ರಾಧ್ಯಾಪರ ಹುದ್ದೆಗೆ 2021ರ ಆ.26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಅರ್ಜಿದಾರರನ್ನು ನಿವೃತ್ತ ಯೋಧರ ಕೋಟಾ ಪರಿಗಣಿಸಬೇಕು ಎಂದು ಆದೇಶಿಸಿದೆ.ಮಹಿಳೆಯರು ಅತ್ಯುನ್ನತ ಸ್ಥಾನಗಳನ್ನು ಗಳಿಸುತ್ತಿದ್ದಾರೆ, ಅವರು ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಗಳಲ್ಲಿ ಅಧಿಕಾರಿಗಳ ಹಂತದಲ್ಲಿ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಶತಮಾನಗಳಷ್ಟು ಹಳತಾದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿದ್ದ ಲಿಂಗ ತಾರತಮ್ಯ ತೊಲಗಬೇಕು ಮತ್ತು ನೀತಿ ನಿರೂಪಕರು ಈ ಬಗ್ಗೆ ಚಿಂತನೆ ನಡೆಸಿ ನಿಯಮಗಳಿಗೆ ಸೂಕ್ತ ತಿದ್ದುಪಡಿಯನ್ನು ಮಾಡಬೇಕು, ಅದಕ್ಕಾಗಿ ಹಾಲಿ ಇರುವ ನಿಯಮದಲ್ಲಿ ಪುರುಷರು ಎಂದು ಇರುವೆಡೆ ಸಿಬ್ಬಂದಿ ಎಂದು ಬದಲಾಯಿಸಬೇಕು. ಎಂದು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.ಸಾಂವಿಧಾನಿಕ ಉಲ್ಲಂಘನೆ: “ಇದು ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ, ಲಿಂಗದ ಆಧಾರದ ಮೇಲೆ ಪ್ರಯೋಜನ ನೀಡುವುದು ಸರಿಯಲ್ಲ, ಇದು ಅಸಮಾನತೆಯಾಗುತ್ತದೆ. ಪುತ್ರಿ ಮದುವೆಯಾದಾಕ್ಷಣ ಆಕೆಯ ಹಕ್ಕು ಮೊಟಕುಗೊಳಿಸುವುದು ಸರಿಯಲ್ಲ. ಪುತ್ರ ಪುತ್ರನಾಗಿಯೇ ಇದ್ದಾಗ, ಪುತ್ರಿಯನ್ನೂ ಸಹ ಅದೇ ರೀತಿ ಪರಿಗಣಿಸಬೇಕಾಗುತ್ತದೆ. ಮದುವೆ ಆಗುವುದರಿಂದ ಪುತ್ರನ ಸ್ಥಿತಿಗತಿ ಬದಲಾಗಲಿಲ್ಲವೆಂದರೆ, ಪುತ್ರಿಯ ಸ್ಥಾನ ಏಕೆ ಬದಲಾಗಬೇಕು” ಎಂದೂ ನ್ಯಾಯಪೀಠ ಕೇಳಿದೆ.”ಮಾಜಿ ಯೋಧರ ಪುತ್ರ ಅಥವಾ ಪುತ್ರಿ ಯಾರೇ ಆದರೂ 25 ವರ್ಷದ ನಂತರ ಅವರಿಗೆ ಒಂದೇ ಮಾರ್ಗಸೂಚಿ ಇರುತ್ತದೆ. 25 ವರ್ಷದ ಕೆಳಗಿನ ಪುತ್ರಿ ಮದುವೆ ಆಗಿದ್ದಾರೆ ಎನ್ನುವ ಕಾರಣಕ್ಕೆ ಅವರು ಐಡಿ ಕಾರ್ಡ್‌ ಪಡೆಯುವ ಹಕ್ಕಿನಿಂತ ವಂಚಿತರನ್ನಾಗಿ ಮಾಡುವುದು ಸರಿಯಲ್ಲ. ಇದು ಸಂವಿಧಾನದ ಕಲಂ 14 ಮತ್ತು 15ರ ಉಲ್ಲಂಘನೆಯಾಗುತ್ತದೆ. ಪುತ್ರ ಮದುವೆ ಆಗಲಿ ಅಥವಾ ಆಗದೇ ಇದ್ದರೂ ಪ್ರಯೋಜನ ಪಡೆಯುತ್ತಾರೆ, ಆದರೆ ಪುತ್ರಿ ಅವಿವಾಹಿತರಾಗಿ ಉಳಿದರೆ ಮಾತ್ರ ಪ್ರಯೋಜನ ಪಡೆಯುತ್ತಾರೆಂಬ ನಿಯಮ ಸರಿಯಲ್ಲ” ಎಂದು ಕೋರ್ಟ್ ಹೇಳಿದೆ.ಪ್ರಕರಣದ ಹಿನ್ನೆಲೆ: ಅರ್ಜಿದಾರರು ಕೆಇಎ ನಡೆಸುವ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಮಾಜಿ ಯೋಧರ ಕೋಟಾದಡಿ ಅವಕಾಶ ಬಯಸಿದ್ದ ಅವರು, ಅದಕ್ಕಾಗಿ ತಮ್ಮ ತಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಅವಲಂಬಿತರ ಗುರುತಿನ ಚೀಟಿಗೆ ಸೈನಿಕ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿದಾರರು ವಿವಾಹವಾಗಿರುವುದರಿಂದ ನಿಯಮದಂತೆ ಅವರಿಗೆ ಐಡಿ ಕಾರ್ಡ್‌ ನೀಡಲಾಗದೆಂದು ಇಲಾಖೆ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಣ ಸಚಿವ ಬಿಸಿ ನಾಗೇಶ್ ಹಾಗು ಸ್ಥಳಿಯ ಶಾಸಕ ಶರಣು ಸಲಗರ್ ನೊಡಲೆಬೆಕಾದ ಸುದ್ಧಿ.

Wed Jan 4 , 2023
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅತಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮಸ್ಯೆಗಳ ಆಗರ ಮಕ್ಕಳಿಗೆ ಮೂಲ ಸೌಕರ್ಯಗಳ ಕೊರತೆ ಸೆರಿ ಮಕ್ಕಳು ಕುಳಿತುಕೊಂಡು ಉಟ ಮಾಡಲು ಸಹ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಒಂದೆಡೆ ಖಾಸಗಿ ಶಾಲೆಗಳಿಂದ ಸರ್ಕಾರ ಶಾಲೆಗೆ ಕರೆತರುವ ಹರಸಹಾಸ ನಡೆಸುತ್ತಿದ್ದರೆ ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಶಾಲೆಯನ್ನು ಬಿಟ್ಟು ಹೊಗುವ ಪರಿಸ್ಥಿತಿ ನಿರ್ಮಾಣವಾಗಿದೆ.. ಶಾಲಾ ಕೊಠಡಿಗಳು ಕಳೆದ ಮಳೆಗಾಲದಲ್ಲಿ ಬಿದ್ದಿದ್ದು ಇದಿಗ ಶಾಲಾ ಮಕ್ಕಳು […]

Advertisement

Wordpress Social Share Plugin powered by Ultimatelysocial