‘ದಿಯಾ’ ಖ್ಯಾತಿಯ ಖುಷಿ ರವಿ- ವಿವೇಕ್ ಸಿಂಹ ನಟನೆಯ ‘ಸ್ಪೂಕಿ ಕಾಲೇಜ್’ ಟ್ರೇಲರ್ ರಿಲೀಸ್

‘ದಿಯಾ’ ಖ್ಯಾತಿಯ ನಟಿ ಖುಷಿ ರವಿ ಹಾಗೂ ವಿವೇಕ್ ಸಿಂಹ ಒಟ್ಟಿಗೆ ನಟಿಸಿರುವ ‘ಸ್ಪೂಕಿ ಕಾಲೇಜ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಸೃಷ್ಟಿಸಿದ್ದ ಈ ಸಿನಿಮಾದ ರಿಲೀಸ್ ಡೇಟ್ ಕೂಡ ಬಹಿರಂಗಗೊಂಡಿದೆ. ಟ್ರೇಲರ್ ನೋಡಿದವರಿಗೆ ಇದೊಂದು ಹಾರರ್ ಸಿನಿಮಾ ಎಂಬುದು ಗೊತ್ತಾಗಿದೆ. ಈ ಚಿತ್ರವನ್ನು ‘ರಂಗಿತರಂಗ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್ ಕೆ ಪ್ರಕಾಶ್ ನಿರ್ಮಾಣ ಮಾಡಿದ್ದಾರೆ. ಹೊಸ ಪ್ರತಿಭೆ ಭರತ್ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಭರತ್, ‘ಸ್ಪೂಕಿ ಎಂದರೆ ಭಯ ಎಂದರ್ಥ. ಈ ಭಯವನ್ನು ನಮ್ಮ ಚಿತ್ರದಲ್ಲಿ ಸ್ವಲ್ಪ ಭಿನ್ನವಾಗಿ ತೋರಿಸಿದ್ದೇನೆ ಎನ್ನಬಹುದು. ಧಾರವಾಡದ ನೂರಕ್ಕೂ ಹೆಚ್ಚಿನ ವರ್ಷಗಳ ಇತಿಹಾಸವಿರುವ ಕಾಲೇಜ್‌ವೊಂದರಲ್ಲಿ ನಮ್ಮ ಸಿನಿಮಾದ ಬಹುತೇಕ ಚಿತ್ರೀಕರಣ ನಡೆದಿದೆ. ದಾಂಡೇಲಿ ಅಭಯಾರಣ್ಯದಲ್ಲೂ ಶೂಟಿಂಗ್ ಮಾಡಿದ್ದೇವೆ. ನಾಯಕ ವಿವೇಕ್ ಸಿಂಹ ಹಾಗೂ ನಾಯಕಿ ಖುಷಿ ರವಿ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಈ ಸಿನಿಮಾದ ಮತ್ತೊಂದು ಹೈಲೆಟ್ ಎನ್ನಬಹುದು. ನಮ್ಮ ಕನಸನ್ನು ನನಸು ಮಾಡಿದ ನಿರ್ಮಾಪಕ ಎಚ್ ಕೆ ಪ್ರಕಾಶ್ ಅವರಿಗೆ ಧನ್ಯವಾದಗಳು’ ಎನ್ನುತ್ತಾರೆ.60ರ ದಶಕದಲ್ಲಿ ತೆರೆಕಂಡ ಡಾ. ರಾಜ್‌ಕುಮಾರ್ ಹಾಗೂ ಲೀಲಾವತಿ ಅಭಿನಯಿಸಿದ್ದ ‘ವೀರ ಕೇಸರಿ’ ಚಿತ್ರದ ‘ಮೆಲ್ಲುಸಿರೆ ಸವಿಗಾನ..’ ಹಾಡು ದೊಡ್ಡ ಹಿಟ್ ಆಗಿತ್ತು. ವಿಶೇಷವೆಂದರೆ, ಆ ಹಾಡನ್ನು ‘ಸ್ಪೂಕಿ ಕಾಲೇಜ್’ ಚಿತ್ರಕ್ಕಾಗಿ ಮರುಬಳಕೆ ಮಾಡಿಕೊಳ್ಳಲಾಗಿದೆ. ಈ ಹಾಡಿನಲ್ಲಿ ‘ಏಕ್ ಲವ್ ಯಾ’ ಚಿತ್ರದ ಖ್ಯಾತಿಯ ರೀಷ್ಮಾ ನಾಣಯ್ಯ ಕಾಣಿಸಿಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸುಮಾರು 15 ಎಕರೆ ಗದ್ದೆ ಬೆಂಕಿಗೆ ಆಹುತಿ.

Fri Jan 6 , 2023
ಜಮಖಂಡಿ ತಾಲೂಕಿನ ಹೊರವಲಯ ಕಡಕೋಳ ರಸ್ತೆಯಲ್ಲಿರುವ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 15 ಎಕರೆ ಕಬ್ಬಿಣ ಗದ್ದೆ ಬೆಂಕಿಗೆ ಆಹುತಿಯಾದ ಘಟನೆ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿ ನಂದಿಸಲು ಹರಸಾಹಸ ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರ ಸಹಕಾರ ಹಾಗೂ ಅಗ್ನಿಶಾಮಕ ಸಿಬ್ಬಂದಿಯವರ ಮುಂಜಾಗ್ರತೆ ಕ್ರಮವಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಮಾರಸ್ವಾಮಿ ಕಂಬಿ, ರಾಜು ಮಾರುತಿ ಗಾರ್ಗೆ ಮತ್ತು ಅಪ್ಪಾಸಾಬ ಶಿಂದೆ ಅವರಿಗೆ ಸೇರಿದ ಕಬ್ಬಿಣ […]

Advertisement

Wordpress Social Share Plugin powered by Ultimatelysocial