ಡಿಕೆ ಶಿವಕುಮಾರ್ ಬಗ್ಗೆ ಅಪದ್ಧ ಮಾತು: ಕಾಂಗ್ರೆಸ್ ಮಾಜಿ ಶಾಸಕ ಅಶೋಕ್ ಪಟ್ಟಣ್ ಗೆ ಕೆಪಿಸಿಸಿ ನೊಟೀಸ್

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಪತ್ರಿಕಾಗೋಷ್ಠಿಯಲ್ಲಿ ಕುಳಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಗ್ಗೆ ಪಿಸುಮಾತು ಆಡಿದ್ದ ಮಾಜಿ ಶಾಸಕ ಅಶೋಕ್ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ತಪ್ಪಿಸುವ ಕುರಿತಾಗಿ ಅಶೋಕ ಪಟ್ಟಣ್ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಪಿಸುಮಾತು ಆಡಿದ್ದರು.ಈ ವಿಡಿಯೋ ವೈರಲ್ ಆಗಿತ್ತು.ಈ ಹಿನ್ನಲೆಯಲ್ಲಿ ಅಶಿಸ್ತಿನ ನಡವಳಿಕೆ ಎಂದು ಪರಿಗಣಿಸಿ ರೆಹಮಾನ್ ಖಾನ್ ನೇತೃತ್ವದ ಕೆಪಿಸಿಸಿ ಶಿಸ್ತು ಸಮಿತಿ ವಿವರಣೆ ಕೇಳಿ ಅಶೋಕ ಪಟ್ಟಣ್‌ಗೆ ನೋಟಿಸ್ ನೀಡಿದೆ. ಏಳು ದಿನದ ಒಳಗೆ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.ಪಕ್ಷದ ನಾಯಕರೂ, ಅನುಭವಿ ಶಾಸಕರೂ ಆದ ನೀವು ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷರ ಘನತೆಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಹಾನಿಯಾಗುವಂತಹ ವಿಚಾರಗಳನ್ನು ಮಾತನಾಡಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.ತಾವು ಮಾತನಾಡಿರುವ ವಿಚಾರಗಳು ಸಂಪೂರ್ಣ ಆಧಾರರಹಿತವಾಗಿವೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ತಮ್ಮ ಈ ವರ್ತನೆಯಿಂದ ಪಕ್ಷದ ಘನತೆ-ಗೌರವಕ್ಕೆ ಕುಂದುಂಟಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ತಮ್ಮ ನಡವಳಿಕೆ ಬಗ್ಗೆ ಏಳು ದಿನದಲ್ಲಿ ಸಮಾಜಾಯಿಷಿ ನೀಡಬೇಕು ಎಂದು ಈ ಮೂಲಕ ಸೂಚಿಸಲಾಗಿದೆ ಎಂದು ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್‌ನಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಸಂಸದ ಎಚ್​.ಬಿ.ಪಾಟೀಲ ನಿಧನ: ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ

Wed Feb 2 , 2022
ಬಾಗಲಕೋಟೆ: ಮಾಜಿ ಸಂಸದ ಎಚ್​.ಬಿ. ಪಾಟೀಲ ಅವರು ನಿಧನರಾದರು. ಇವರಿಗೆ 80 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು.ಇಂದು(ಬುಧವಾರ) ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪುರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಾಟೀಲ ಅವರಿಗೆ ಪತ್ನಿ, ಐವರು ಪುತ್ರಿಯರು, ಪುತ್ರ ಇದ್ದಾರೆ.1942ರ ಮಾರ್ಚ್​ 29ರಂದು ಜನಿಸಿದ […]

Advertisement

Wordpress Social Share Plugin powered by Ultimatelysocial