ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಬೆಳಗಾವಿ ಎಂಇಎಸ್ ಪುಂಡಾಟಿಕೆ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್:ಸಿ.ಟಿ.ರವಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಬೆಳಗಾವಿ ಎಂಇಎಸ್ ಪುಂಡಾಟಿಕೆ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ ಅನ್ನೋದು ಬಹಳ ಸ್ಪಷ್ಟ ಎಂದು ಬಿಜೆಪಿ ಶಾಸಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ.ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ.ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಎಂಇಎಸ್ ಜೊತೆ ಇದ್ದಿದ್ದು ಕಾಂಗ್ರೆಸ್ ಕಾರ್ಯಕರ್ತರು.ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್ ಕಾರ್ಯಕರ್ತರು.ಡಿ.ಕೆ ಶಿವಕುಮಾರ್, ಜಮೀರ್ ಅಹ್ಮದ್ ಕಟ್ಟಾ ಬೆಂಬಲಿಗರಿಂದಲೇ ಕೃತ್ಯ ನಡೆಸಲಾಗಿದೆ ಎಂದು ಆಕ್ರೋಶ ಹೊರ ಹಾಕಿದರು.ಸಂಗೊಳ್ಳಿ ರಾಯಣ್ಣ, ಬಸವೇಶ್ವರ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್, ಎಂಇಎಸ್ ಕಾರ್ಯಕರ್ತರು.ಜಾತಿ ಸಂಘರ್ಷ, ಭಾಷಾ ಸಂಘರ್ಷವನ್ನು ಹುಟ್ಟು ಹಾಕುವುದೇ ಇವರ ಉದ್ದೇಶ. ಹಾಗಾಗಿಯೇ ಎಂಇಎಸ್ ಸಂಘಟನೆಯನ್ನು ಕೆಪಿಸಿಸಿ ಅಧ್ಯಕ್ಷರು ಸಮರ್ಥನೆ ಮಾಡಿದ್ದಾರೆ. ಈ ಷಡ್ಯಂತ್ರವನ್ನು ಬಯಲಿಗೆಳೆಯಬೇಕೆಂದು ಸಿಎಂ, ಗೃಹ ಸಚಿವರನ್ನ ಆಗ್ರಹ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೇಮ್ಸ್, ಗಂಧದ ಗುಡಿ: ಪುನೀತ್ ಅಭಿಮಾನಿಗಳಿಗೆ ಮೊದಲು ಸಿಗೋದು ಯಾವುದು?

Mon Dec 20 , 2021
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಈಗ ಅವರಿಲ್ಲದ ನೋವು ಕಾಡುತ್ತಲೇ ಇದೆ. ಆದರೆ ಅವರನ್ನು ಕೊನೆ ಬಾರಿ ತೆರೆ ಮೇಲೆ ನೋಡಲು ಮೂರು ಅವಕಾಶಗಳಿವೆ. ಸಾವಿಗೂ ಮುನ್ನ ಪುನೀತ್ ನಟಿಸಿದ್ದ ಲಕ್ಕಿ ಮ್ಯಾನ್, ಜೇಮ್ಸ್ ಮತ್ತು ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆಯಾಗಬೇಕಿದೆ. ಈ ಪೈಕಿ ಮೊದಲು ಯಾವುದು ಪುನೀತ್ ಅಭಿಮಾನಿಗಳ ಎದುರು ಬರಬಹುದು ಎಂಬ ಕುತೂಹಲವಿದೆ. ಈ ಪೈಕಿ ಗಂಧದ ಗುಡಿ ಮುಂದಿನ ವರ್ಷ ತೆರೆ […]

Advertisement

Wordpress Social Share Plugin powered by Ultimatelysocial