ದಂತವೈದ್ಯಕೀಯ, ಆಯುಷ್ ಕೋರ್ಸ್‌ಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು,

ಬೆಂಗಳೂರು, ಫೆ.4: ಯುಜಿನೀಟ್ 2021ನೇ ಸಾಲಿನ ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಕೋರ್ಸ್‌ಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಫೆ.4ರಂದು ಅಣಕು ಸೀಟು ಹಂಚಿಕೆ ಮಾಡಲಾಗಿದೆ.ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಅಣಕು ಸೀಟು ಹಂಚಿಕೆ ಮಾಡಿ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ  ಪ್ರಕಟಿಸಲಾಗಿದೆ.ಅಭ್ಯರ್ಥಿಗಳು ಫಲಿತಾಂಶವನ್ನು ಗಮನಿಸಿ, ನಂತರ ಅವಶ್ಯವಿದ್ದಲ್ಲಿ ಸೀಟು ಆಯ್ಕೆಯ ಇಚ್ಛೆಗಳನ್ನು ಬದಲಿಸಬಹುದು, ಸೇರಿಸಬಹುದು ಅಥವಾ ಅಳಿಸಬಹುದು ಎಂದು ಸೂಚಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಫೆ.7ರ ಬೆಳಗ್ಗೆ 8ರೊಳಗೆ ಇಚ್ಛೆ (ಆಪ್ಷನ್ಸ್) ದಾಖಲಿಸಬಹುದು. ನಿಗದಿತ ಸಮಯದ ನಂತರ ಆಯ್ಕೆ ಬದಲಾವಣೆಗೆ ಅವಕಾಶ ಇರುವುದಿಲ್ಲ. ಈ ಪ್ರಕಾರವೇ ಮೊದಲ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.ವೇಳಾಪಟ್ಟಿ ಹೀಗಿದೆ:ಫೆ.4  : ಅಣಕು ಸೀಟು ಹಂಚಿಕೆಯ ಫಲಿತಾಂಶಫೆ.4ರಿಂದ 7 : ಆಯ್ಕೆಗಳನ್ನು ಬದಲಾಯಿಸಲು ಅವಕಾಶಫೆ. : ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಫೆ.9 : ಪೋಷಕರ ಜೊತೆ ಚರ್ಚಿಸಿ ಸೂಕ್ತವಾದ ಚಾಯ್ಸ್ ಆಯ್ಕೆ ಮಾಡಿಕೊಳ್ಳಬಹುದುಫೆ.8ರಿಂದ ಫೆ.10    ಚಾಯ್ಸ್-1, ಚಾಯ್ಸ್-2 ಆಯ್ಕೆ ಮಾಡಿದ ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡಬೇಕುಫೆ.8ರಿಂದ ಫೆ.10 : ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಸಲ್ಲಿಸುವುದು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.ಫೆ.11 : ಚಾಯ್ಸ್-1 ಮೂಲಕ ಸೀಟು ಪಡೆದ ವಿದ್ಯಾರ್ಥಿಗಳು ನಿಗದಿತ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜಿಗೆ ತೆರಳಿ ಪ್ರವೇಶ ಪಡೆಯಲು ಕೊನೆಯ ಅವಕಾಶ ̤

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದಿರಾ ತ್ಯಾಗವನ್ನು ಅಳಿಸಲು ಕೇಂದ್ರ ಪ್ರಯತ್ನಿಸುತ್ತಿದೆ: ಕಾಂಗ್ರೆಸ್

Sat Feb 5 , 2022
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸ್ಮರಣೆಯನ್ನು ಅಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಅಮರ್ ಜವಾನ್ ಜ್ಯೋತಿಯಲ್ಲಿನ ಜ್ವಾಲೆಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದೊಂದಿಗೆ ವಿಲೀನಗೊಳಿಸುವ ಕೇಂದ್ರದ ನಿರ್ಧಾರವನ್ನು ಶುಕ್ರವಾರ ಕಟುವಾಗಿ ಟೀಕಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಚೌಧರಿ, ಧಾರ್ಮಿಕ ಪ್ರತಿಮೆಗಳು ಮತ್ತು ವ್ಯಕ್ತಿಗಳಿಗೆ ಸಂಬಂಧಿಸಿದ ದಿನಾಂಕಗಳನ್ನು ಆಚರಿಸಲು ಸರ್ಕಾರ ನಿರ್ಧರಿಸಿದ್ದರೂ, ಅವರ ಬೋಧನೆಗಳನ್ನು […]

Advertisement

Wordpress Social Share Plugin powered by Ultimatelysocial