ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು!

 

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ದೆಹಲಿ ಎನ್‍ಸಿಆರ್ ಪ್ರದೇಶದ ಒಂದು ಶಾಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ತಕ್ಷಣದಿಂದ ಮುಚ್ಚಲಾಗಿದೆ.

ಹೊಸ ಪ್ರಬೇಧದ ಸೋಂಕು ಪತ್ತೆಯಾಗುವವರೆಗೆ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು ದೆಹಲಿ ಸರ್ಕಾರ ಅಭಯ ನೀಡಿದೆ.

ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ಪಾಸಿಟಿವಿಟಿ ದರ ಹೆಚ್ಚುತ್ತಿದ್ದು, ಪ್ರತಿ ಶತ ಒಂದಕ್ಕಿಂತ ಅಧಿಕವಾಗಿರುವುದನ್ನು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ದೃಢಪಡಿಸಿದ್ದಾರೆ.

ಕಳೆದ ವಾರದವರೆಗೂ ಪಾಸಿಟಿವಿಟಿ ದರ ಶೇಕಡ ಒಂದಕ್ಕಿಂತ ಕಡಿಮೆ ಇದ್ದ ರಾಜಧಾನಿಯಲ್ಲಿ ಸೋಮವಾರ ಪಾಸಿಟಿವಿಟಿ ದರ ಶೇಕಡ 2.7ಕ್ಕೆ ಏರಿದೆ. ಹಬ್ಬದ ಸೀಸನ್‍ನ ವಾರಾಂತ್ಯದಲ್ಲಿ ತಪಾಸಣೆಗಳು ಕಡಿಮೆ ನಡೆದಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ಪರೀಕ್ಷೆ ನಡೆಸಿದ 5079 ಮಾದರಿಗಳ ಪೈಕಿ 137 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಇದು ಮತ್ತೊಂದು ಅಲೆಯ ಸ್ಪಷ್ಟ ಸೂಚನೆ ಎಂದು ತಜ್ಞರು ಹೇಳುತ್ತಾರೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಾತಾವರಣದಲ್ಲಿ ವೈರಸ್ ಇನ್ನೂ ಇದೆ. ಇದರಿಂದ ಸೋಂಕು ಹರಡುವುದು ಸಹಜ, ಆದರೆ ಆಸ್ಪತ್ರೆಗೆ ದಾಖಲಾಗುವ ದರ ಕಡಿಮೆ ಇರುವ ವರೆಗೂ ಆತಂಕಪಡುವ ಅಗತ್ಯವಿಲ್ಲ ಎಂದು ಎಐಐಎಂಎಸ್‍ನ ಔಷಧ ವಿಭಾಗದ ಹೆಚ್ಚುವರಿ ಪ್ರೊಫೆಸರ್ ಡಾ.ನೀರಜ್ ನಿಶ್ಚಲ್ ಹೇಳಿದ್ದಾರೆ.

ಕಳೆದ ಒಂದು ವಾರದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಕಾಯ್ದಿರಿಸಿರುವ 9745 ಬೆಡ್‍ಗಳ ಪೈಕಿ ಕೇವಲ 47 ಮಾತ್ರ ಭರ್ತಿಯಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನಾ !

Tue Apr 12 , 2022
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಭಾಷಣದ ವೇಳೆ ಮಾತಿನ ಭರಾಟೆಯಲ್ಲಿ ‘ಕಾಂಗ್ರೆಸ್‌ ಮುಕ್ತ ಭಾರತ’ಕ್ಕೆ ಕರೆ ನೀಡಿ ಪೇಚೆಗೆ ಸಿಲುಕಿದ ಪ್ರಸಂಗ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಮುಕ್ತ ಭಾರತ ಮಾಡಬೇಕು ಎಂದು ಹೇಳಿ ನಂತರ ಕ್ಷಮಿಸಿ ಬಿಜೆಪಿ ಮುಕ್ತ ಭಾರತ ಎಂದು ಹೇಳಲು ಹೋಗಿ ಕಾಂಗ್ರೆಸ್‌ ಮುಕ್ತ […]

Advertisement

Wordpress Social Share Plugin powered by Ultimatelysocial