ದೊಡ್ಡರಂಗೇಗೌಡ ವಿದ್ವಾಂಸ.

ವಿದ್ವಾಂಸ, ಕವಿ, ಪ್ರಾಧ್ಯಾಪಕ, ಚಲನಚಿತ್ರ ಸಾಹಿತಿ, ಉಪನ್ಯಾಸಕ ಹೀಗೆ ಹಲವು ರೀತಿಯಲ್ಲಿ ಶೋಭಾಯಮಾನರಾಗಿ ಕನ್ನಡ ನಾಡಿನಲ್ಲಿ ಪ್ರಕಾಶಮಾನರಾಗಿದ್ದು, ಇವೆಲ್ಲ ಗುಣಗಳನ್ನೂ ಸವಿಪಾಕವಾಗಿ ಎಂಬಂತೆ ಸರಳ ಸಜ್ಜನಿಕೆಯಲ್ಲಿ ಬೆಸೆದಂತಿರುವ ನಮ್ರತೆಯ ಹಿರಿಯ ಚೇತನರು ದೊಡ್ಡರಂಗೇಗೌಡರು.ಶ್ರೀಯುತ ರಂಗೇಗೌಡರು ಮತ್ತು ಅಕ್ಕಮ್ಮನವರ ಮಗನಾಗಿ 1946ರ ಫೆಬ್ರುವರಿ 7ರಂದು ಜನಿಸಿದ ದೊಡ್ಡರಂಗೇಗೌಡರು ಕುರುಬರ ಹಳ್ಳಿ, ಬಡವನ ಹಳ್ಳಿ, ಮಧುಗಿರಿ, ತುಮಕೂರು ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿ 1970ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಎ. ಆನರ್ಸ್ ಪದವಿ, 1972 ರಲ್ಲಿ ಎಂ.ಎ. ಪದವಿ ಪಡೆದರು. ಸ್ನಾತಕೋತ್ತರ ಪದವಿ ಸಂದರ್ಭದಲ್ಲಿ ಜಾನಪದದ ಕುರಿತು ಅವರು ವಿಶೇಷ ಅಧ್ಯಯನ ಕೈಗೊಂಡರು. 2004 ವರ್ಷದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ‘ನವೋದಯ ಕಾವ್ಯ: ಒಂದು ಪುನರ್ ಮೌಲ್ಯಮಾಪನ’ ಎಂಬ ಮಹಾಪ್ರಬಂಧಕ್ಕಾಗಿ ಅವರು ಡಾಕ್ಟರೇಟ್ ಪದವಿಯನ್ನು ಗಳಿಸಿದರು.1972ರಿಂದ ಬೆಂಗಳೂರು ನಗರದ ಕೃಷ್ಣರಾಜಮಾರುಕಟ್ಟೆ ಬಳಿಯಲ್ಲಿನ ‘ಎಸ್.ಎಲ್.ಎನ್. ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿ’ನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ದೊಡ್ಡರಂಗೇಗೌಡರು 2002ರಲ್ಲಿ ನಿವೃತ್ತರಾಗಿದ್ದಾರೆ. ಅವರು ಶೇಷಾದ್ರಿಪುರಂ ಕಾಲೇಜಿನ ಕನ್ನಡ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ಗೌರವ ನಿರ್ದೇಶಕರಾಗಿ ಸಹಾ ಕೆಲಸಮಾಡಿದ್ದಾರೆ. ಕನ್ನಡ ನಾಡು ಅವರನ್ನು ವಿಧಾನ ಪರಿಷತ್ತಿಗೂ ಬರಮಾಡಿಕೊಂಡಿದೆ. ರಾಜ್ಯ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳಲ್ಲೂ ಅವರ ಸೇವೆ ಸಂದಿದೆ. ದೇಶ. ಅವರಿಗೆ ಪದ್ಮಶ್ರೀ ಗೌರವ ನೀಡಿದೆ. ಕನ್ನಡ ನಾಡು ಅವರಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿತ್ತು.ವಿದ್ಯಾರ್ಥಿ ದೆಸೆಯಿಂದಲೇ ಕಥೆ, ಕವಿತೆ, ವಿಮರ್ಶೆಗಳನ್ನು ಬರೆಯುತ್ತಾ ಬಂದ ಡಾ. ದೊಡ್ಡರಂಗೇಗೌಡರು ನೂರಾರು ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟರಾಗಿ ಕಂಗೊಳಿಸಿದ್ದಾರೆ.1972 ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯಿಂದ ಗೌಡರ ಕವನ ಸಂಕಲನ ‘ಕಣ್ಣು ನಾಲಗೆ ಕಡಲು ಕಾವ್ಯ’ ಕೃತಿಗೆ ಬಹುಮಾನ ಬಂದಿದೆ. 1990ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇವರ ‘ಪ್ರೀತಿ ಪ್ರಗಾಥ’ ಕೃತಿಯು ವರ್ಷದ ಅಭಿಜಾತ ಕಾವ್ಯ ಎಂದು ವಿಮರ್ಶಕರ ಮೆಚ್ಚುಗೆ ಪಡೆದು – “ರತ್ನಾಕರವರ್ಣಿ – ಮುದ್ದಣ ಕಾವ್ಯ ಪ್ರಶಸ್ತಿ” ಗೌರವ ಗಳಿಸಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಿ. ಎಸ್. ಶಿವರುದ್ರಪ್ಪ ರಾಷ್ಟ್ರಕವಿ.

Tue Feb 7 , 2023
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಹುಟ್ಟಿದ ಜಿ. ಎಸ್. ಶಿವರುದ್ರಪ್ಪ (ಜೀಯೆಸ್ಸೆಸ್) ಈ ನಾಡಿನಲ್ಲಿ ವ್ಯಾಪಕವಾಗಿ ಸಂಚರಿಸಿದ್ದವರು. ಪ್ರವಾಸ ಪ್ರೀತಿಯ ಜೀಯೆಸ್ಸೆಸ್ ಈ ಸುತ್ತುವಿಕೆಯಿಂದ ಬಹುಶ್ರುತತೆಯನ್ನು, ಸಮಚಿತ್ತವನ್ನು, ಜನಸಂಪರ್ಕವನ್ನು ಪಡೆದಿದ್ದರು.ಸೃಜನ, ವಿಮರ್ಶೆ, ಮೀಮಾಂಸೆ, ಅಧ್ಯಯನ, ಅಧ್ಯಾಪನ, ಆಡಳಿತ, ಸಂಘಟನೆ – ಈ ಮುಂತಾದ ಸಾಂಸ್ಕೃತಿಕ ನೆಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕನ್ನಡ ಸಂಸ್ಕೃತಿಯ ಚಲನಶೀಲತೆಗೆ ತಮ್ಮ ಕೊಡುಗೆ ನೀಡುತ್ತ ಬಂದ ಮುಖ್ಯರಲ್ಲಿ ಜೀಯೆಸ್ಸೆಸ್ ಒಬ್ಬರಾಗಿದ್ದಾರೆ. ಡಾ. ಜಿ. ಎಸ್. ಶಿವರುದ್ರಪ್ಪನವರು ಗೋವಿಂದ ಪೈ, […]

Advertisement

Wordpress Social Share Plugin powered by Ultimatelysocial