ಡೋಲೋ 650 ಮಾತ್ರೆ ತಯಾರಿಕಾ ಲ್ಯಾಬ್ ಗೆ IT ಶಾಕ್;

 

ಬೆಂಗಳೂರು: ಮೈಕ್ರೋ ಲ್ಯಾಬ್ಸ್ ಪ್ರೈ ಲಿ ಕಂಪನಿಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದೇಶದ 40 ಕಡೆಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮೈಕ್ರೋ ಲ್ಯಾಬ್ಸ್ ಪ್ರೈ.ಲಿ. ಡೋಲೋ 650 ಮಾತ್ರೆ ತಯಾರಿಕಾ ಕಂಪನಿಯಾಗಿದ್ದು, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕೇಂದ್ರ ಕಚೇರಿ ಸೇರಿದಂತೆ ತಮಿಳುನಾಡು, ಗೋವಾ, ಪಂಜಾಬ್, ಮುಂಬೈ, ದೆಹಲಿ ಸೇರಿದಂತೆ ದೇಶದ 40 ಕಡೆಗಳಲ್ಲಿ ಇರುವ ಶಾಖೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಂಪನಿಯ ಸಿಎಂಡಿ ದಿಲೀಪ್ ಸುರಾನಾ, ಡೈರೆಕ್ಟರ್ ಆನಂದ್ ಸುರಾನಾ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಕೋವಿಡ್ ಸಮಯದಲ್ಲಿ ಮೈಕ್ರೋ ಲ್ಯಾಬ್ಸ್ ಅತಿ ಹೆಚ್ಚು ವ್ಯಾಪಾರ ವಹಿವಾಟು ನಡೆಸಿತ್ತಲ್ಲದೇ ಡೋಲೊ 650 ಮಾತ್ರೆ ದೇಶದಲ್ಲಿಯೇ ಅತಿ ಹೆಚ್ಚು ಮಾರಾಟವಾಗಿತ್ತು. ಕಂಪನಿ ವಿರುದ್ಧ ತೆರಿಗೆ ವಂಚನೆ ಆರೋಪ ಕೇಳಿಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುರಿ, ಮೇಕೆ (Sheep, Goat Sale) ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.

Wed Jul 6 , 2022
ಜುಲೈ 10ಕ್ಕೆ ಬಕ್ರೀದ್ ಹಬ್ಬ (Bakrid Festival) ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಕುರಿ, ಮೇಕೆ (Sheep, Goat Sale) ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಚಾಮರಾಜಪೇಟೆ ಪೇಟೆ, ಫ್ರೇಜರ್ ಟೌನ್, ಶಿವಾಜಿನಗರ, HBR ಲೇಔಟ್ ಭಾಗದಲ್ಲಿ ಕುರಿ ವ್ಯಾಪಾರ ಜೋರಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ (Corona Pandemic) ಹಿನ್ನೆಲೆ ವ್ಯಾಪಾರ ಇಳಿಮುಖವಾಗಿತ್ತು. ಈ ಬಾರಿ ಯಾವುದೇ ಕೊರೊನಾ ಕಠಿಣ ನಿಯಮಗಳಿಲ್ಲದ (COVID 19 Rules) ಕಾರಣ ಮುಸ್ಲಿಂ ಬಾಂಧವರು ಹಬ್ಬವನ್ನು […]

Advertisement

Wordpress Social Share Plugin powered by Ultimatelysocial