D RAVI:ಭ್ರಷ್ಟಾಚಾರ ಆರೋಪ, ಕೊನೆಗೂ ಮೌನ ಮುರಿದ ರವಿ ಚನ್ನಣ್ಣ;

 ಭ್ರಷ್ಟಾಚಾರದ ಆರೋಪ ಹೊತ್ತಿರುವ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಕೊನೆಗೂ ಮೌನ ಮುರಿದಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಅವರು, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ.

ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿದೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ.

ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದೆ. ಆದರೆ ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾ ದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ ಆದ್ದರಿಂದ ನಾನು ಇದಾ ವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

LPG ಸಿಲಿಂಡರ್ ಗ್ರಾಹಕರಿಗೆ ಗುಡ್ ನ್ಯೂಸ್;

Mon Jan 31 , 2022
 ನೀವು ಗ್ಯಾಸ್ ಸಿಲಿಂಡರ್ ಅನ್ನು ಬುಕ್ ಮಾಡುತ್ತಿದ್ದರೆ ಅಥವಾ ಹೊಸ ಸಂಪರ್ಕವನ್ನು ಪಡೆಯಲು ಯೋಜಿಸುತ್ತಿದ್ದರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ಈಗ ನೀವು ಎಲ್ಪಿಜಿ ಸಿಲಿಂಡರ್ ಅನ್ನು ಅಗ್ಗವಾಗಿ ಪಡೆಯಬಹುದು. ದೇಶದ ಸರ್ಕಾರಿ ತೈಲ ಕಂಪನಿಯು ಗ್ರಾಹಕರಿಗೆ ಉತ್ತಮ ಆಯ್ಕೆಯನ್ನು ತಂದಿದೆ, ಇದರಲ್ಲಿ ನಿಮಗೆ ಗ್ಯಾಸ್ ಸಿಲಿಂಡರ್ ಅಗ್ಗವಾಗಿ ಅಂದರೆ ಕೇವಲ 633 ರೂಗಳಲ್ಲಿ ಸಿಗುತ್ತದೆ. ಈ ಸಮಯದಲ್ಲಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳು ಗಗನಕ್ಕೇರಿವೆ ಎಂದು ನಾವು ನಿಮಗೆ […]

Advertisement

Wordpress Social Share Plugin powered by Ultimatelysocial