ಜುಲೈ 9ರಿಂದ ಮದ್ಯ ಮಾರಾಟ ಬಂದ್ !

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಕೆ ಎಸ್ ಬಿ ಸಿ ಎಲ್ ಅಕೌಂಟ್ ಗೆ ಹಣ ಹಾಕಿದರೆ ಮೊದಲು ನಮಗೆ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಬಿಲ್ಲಿಂಗ್ ವ್ಯವಸ್ಥೆ ಮ್ಯಾನ್ಯುವಲ್ ಆಗಿ ಇತ್ತು. ಆದರೆ ಏಪ್ರಿಲ್ 4ರಿಂದ ಹೊಸ ಪದ್ಧತಿ ಆರಂಭವಾಗಿದೆ. ವೆಬ್ ಇಂಡೆಂಟಿಂಗ್ ವ್ಯವಸ್ಥೆ ಜಾರಿಯಾದಾಗಿನಿಂದ ಎಲ್ಲವನ್ನೂ ಹಿಂದಿನ ದಿನವೇ ಪೂರ್ಣಗೊಳಿಸಬೇಕು. ಸಗಟು ಮದ್ಯ ಖರೀದಿದಾರರಿಗೇ ಸಂಕಷ್ಟ ಎದುರಾಗಿದೆ.

ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ಇಂಡೆಂಟಿಂಗ್ ವ್ಯವಸ್ಥೆಯನ್ನು ಗಂಟೆಯೊಳಗೆ ಸರಿಪಡಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿಯ ಬ್ಯಾಟ್ ಮಂಕಾಗಿದೆ !

Thu Jul 7 , 2022
ಮುಂಬೈ: ಮೂರು ವರ್ಷಗಳ ಹಿಂದಿನವರೆಗೂ ಶತಕ ಸಿಡುವುದನ್ನು ಹವ್ಯಾಸ ಮಾಡಿಕೊಂಡಿದ್ದ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿಯ ಬ್ಯಾಟ್ ಮಂಕಾಗಿದೆ. 2019ರ ನವೆಂಬರ್ ಬಳಿಕ ವಿರಾಟ್ ಕೊಹ್ಲಿ ಒಂದೇ ಒಂದು ಶತಕ ಸಿಡಿಸಿಲ್ಲ. ವಿರಾಟ್ ಫಾರ್ಮ್ ಬಗ್ಗೆ ಇದುವರೆಗೆ ಏನೂ ಮಾತನಾಡದ ಬಿಸಿಸಿಐ ಈಗ ತಾಳ್ಮೆ ಕಳೆದುಕೊಂಡಿದೆ ಎನ್ನುತ್ತಿದೆ ವರದಿ. ಇಂಗ್ಲೆಂಡ್‌ ನಲ್ಲಿ ಗುರುವಾರದಿಂದ ಪ್ರಾರಂಭವಾಗುವ ಟಿ20 ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಆದರೆ ವಿರಾಟ್ […]

Advertisement

Wordpress Social Share Plugin powered by Ultimatelysocial