ಮಾದಕ ವಸ್ತು ಸಾಗಾಟ ಪ್ರಕರಣ .

ಮಂಜೇಶ್ವರ, ಫೆ.05. ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕೂಳೂರಿ ನ ಮುಹಮ್ಮದ್ ನೌಫಾಲ್ (33) ಮತ್ತು ತಲಪಾಡಿ ನೇರ್ಲಪ್ಪಾಡಿ ಯ ಕೆ.

ಬಿ ಫೈಝಲ್ (26) ಬಂಧಿತರು. ಇವರು ಎಂಡಿಎಂಎ ಮಾದಕ ವಸ್ತು ಸಾಗಾಟದ ಏಜೆಂಟ್ ಗಳೆಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಮಂಜೇಶ್ವರ ಪೊಲೀಸರು ಮೂವರನ್ನು ಎಂ ಡಿ ಎಂ ಎ ಮಾದಕ ವಸ್ತು ಸಹಿತ ಪೊಲೀಸರು ಬಂಧಿಸಿದ್ದರು. ಇವರಿಗೆ ಈ ಇಬ್ಬರು ಮಾದಕ ವಸ್ತು ತಲ ಪಿಸಿದ್ದರು. ಬಂಧಿತ ಮೂವರು ನೀಡಿದ ಸುಳಿವು ಆಧಾರಿಸಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಏಜೆಂಟರ್ ಗಳನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ನೌಫಲ್ ಮತ್ತು ಫೈಝಲ್ ಒಂದು ಲಕ್ಷ ರೂ.ಗೆ ಮಾದಕ ವಸ್ತು ತಲಪಿಸಿದ್ದಾಗಿ ಮಾಹಿತಿ ನೀಡಿದ್ದರು. ಮೊಬೈಲ್ ನಂಬ್ರದ ಲೊಕೇಶನ್ ಕೇಂದ್ರೀಕರಿಸಿ ನಡೆಸಿದ ತನಿಖೆಯಿಂದ ಇಬ್ಬರನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎನ್ ಐ ಎಯಿಂದ ಮೂವರು ಶಂಕಿತ ಉಗ್ರರ ಬಂಧನ.

Sun Feb 5 , 2023
ಹೈದರಾಬಾದ್: ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಹೈದರಾಬಾದ್ ನಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅಬ್ದುಲ್ ಜಾಹೀದ್ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿರುವ ಎನ್ ಐ ಎ ಅಧಿಕಾರಿಗಳು, ಬಂಧಿತರಿಂದ ಹ್ಯಾಂಡ್ ಗ್ರೆನೇಡ್, ಮೊಬೈಲ್ ಹಾಗೂ 3ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಂಕಿತ ಉಗ್ರರು ಹೈದರಾಬಾದ್ ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಬಂಧಿತರ ವಿರುದ್ಧ ಯುಎಪಿಎ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ. ಬಂಧಿತ […]

Advertisement

Wordpress Social Share Plugin powered by Ultimatelysocial