ಖರ್ಜೂರ ಮೂಳೆಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಮ್ಯಾಂಗನೀಸ್, ಸೆಲೆನಿಯಮ್, ತಾಮ್ರ, ಮೆಗ್ನೀಸಿಯಮ್ ಮುಂತಾದ ಪದಾರ್ಥಗಳು ಕಂಡುಬರುತ್ತವೆ. ಮೂಳೆಗಳನ್ನು ಬಲಪಡಿಸಲು ಇದು ಸಹಾಯಕವೆಂದು ಪರಿಗಣಿಸಲಾಗುತ್ತದೆ.
ಅಜೀರ್ಣ ಅಥವಾ ಹೊಟ್ಟೆಯ ಸಮಸ್ಯೆಗಳಿದ್ದರೆ, ನೀವು ಖರ್ಜೂರವನ್ನು ತಿನ್ನಬಹುದು. ಇದರಲ್ಲಿನ ಫೈಬರ್ ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಖರ್ಜೂರದಲ್ಲಿರುವ ವಿಟಮಿನ್ ಸಿ, ವಿಟಮಿನ್ ಡಿ ಚರ್ಮಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಮುಖದ ಸುಕ್ಕುಗಳನ್ನು ಕಡಿಮೆ ಮಾಡಲು, ಚರ್ಮದ ಆರೋಗ್ಯವನ್ನು ಸುಧಾರಿಸಲು ಇದು ಸಹಾಯಕ ಎಂದು ಪರಿಗಣಿಸಲಾಗಿದೆ. ಇದಲ್ಲಿರುವ ಆಂಟಿ-ಏಜಿಂಗ್ ಗುಣಗಳು ಚರ್ಮವನ್ನು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.ಆರೋಗ್ಯಕ್ಕೆ ಅಗತ್ಯವಾದ ಅಂಶಗಳಲ್ಲಿ ಪ್ರೋಟೀನ್ ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಸ್ನಾಯುಗಳನ್ನು ಬಲಪಡಿಸಲು ಪ್ರೋಟೀನ್ ಕೆಲಸ ಮಾಡುತ್ತದೆ. ಖರ್ಜೂರಲ್ಲಿರುವ ಪೌಷ್ಠಿಕಾಂಶ ಮತ್ತು ಪ್ರೋಟೀನ್ ಗುಣಲಕ್ಷಣಗಳು ಪ್ರೋಟೀನ್ ಕೊರತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada