HEALTH TIPS:ನೆನಪಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಾದಾಮಿ ಪ್ರಮುಖ ಪಾತ್ರ;

ದೇಹಕ್ಕೆ ಆಮ್ಲಜನಕ ಪೂರೈಕೆ ಮತ್ತು ರಕ್ತ ಸಂಚಾರ ಕ್ರಿಯೆ ಚೆನ್ನಾಗಿ ನಡೆಯಬೇಕಾದರೆ ನಿತ್ಯವೂ ಆರೋಗ್ಯಕರ ಆಹಾರ ಸೇವಿಸುವುದು ಬಹಳ ಮುಖ್ಯ. ಮೆದುಳಿನ ಚಟುವಟಿಕೆ ಮತ್ತು ಜ್ಞಾಪಕ ಶಕ್ತಿಯನ್ನು ಹಿಗ್ಗಿಸುವ ಆಹಾರದ ಬಗ್ಗೆ ತಿಳಿಯೋಣ.

ನೆನಪಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಾದಾಮಿ ಪ್ರಮುಖ ಪಾತ್ರ ವಹಿಸುತ್ತದೆ.

ಬಾದಾಮಿ ಪುಡಿಯನ್ನು ಹಾಲಿನೊಂದಿಗೆ ಸೇವಿಸಬೇಕು. ಇಲ್ಲವಾದರೆ ರಾತ್ರಿ ಹೊತ್ತು ನೆನೆಸಿಟ್ಟು ಬೆಳಿಗ್ಗೆ ಸಿಪ್ಪೆ ತೆಗೆದು ಸೇವಿಸಬೇಕು. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಒಮೆಗಾ ತ್ರೀ ಫ್ಯಾಟಿ ಆಸಿಡ್ ಮೆದುಳಿನ ಕಾರ್ಯಗಳಿಗೆ ಉತ್ತೇಜನ ನೀಡುತ್ತದೆ. ಗರ್ಭಿಣಿಯರಿಗೆ ಮತ್ತು ಚಿಕ್ಕ ಮಕ್ಕಳ ಬೆಳವಣಿಗೆಗೆ ಇದು ಸಹಾಯಕವಾಗಿದೆ.

ಬೆಟ್ಟದ ನೆಲ್ಲಿಕಾಯಿಯನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಟ್ಟದ ನೆಲ್ಲಿಕಾಯಿ ಜ್ಯೂಸ್ ಮಾಡಿ ಕುಡಿಯಬಹುದು ಅಥವಾ ಹಸಿಯಾಗಿ ತಿನ್ನಬಹುದು.

ಕಪ್ಪುಜೀರಿಗೆ ಮತ್ತು ಜೇನುತುಪ್ಪವನ್ನು ಸೇರಿಸಿ ತಿನ್ನಬೇಕು. ಇದರಿಂದ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

HEALTH TIPS:ವೈನ್ ಪ್ರಿಯರಿಗೊಂದು ಸುದ್ದಿ;

Mon Jan 24 , 2022
ಮದ್ಯ ಪ್ರಿಯರಲ್ಲಿ ವೈನ್ ಕುಡಿಯುವವರು ಸ್ವಲ್ಪ ರಿಲ್ಯಾಕ್ಸ್ ಆಗಿರುತ್ತಾರೆ. ಏಕೆಂದರೆ ವೈನ್ ಕುಡಿದರೆ ದೇಹಕ್ಕೆ ಹಾನಿಯಾಗುವುದಿಲ್ಲ ಎಂದು ಬಹಳ ಜನ ನಂಬಿದ್ದಾರೆ. ಆದರೆ ಒಂದು ಅಧ್ಯಯನದ ಪ್ರಕಾರ ಒಂದು ಬಾಟಲ್ ವೈನ್ ಕುಡಿದರೆ 10 ಸಿಗರೇಟ್ ಸೇದಿದಷ್ಟು ಕೆಟ್ಟದಂತೆ. ಅಧ್ಯಯನದಲ್ಲಿ ಇದು ತಿಳಿದು ಬಂದಿದೆ. ಅದರಲ್ಲೂ ಮಹಿಳೆಯರಿಗೆ ಇದರ ಪರಿಣಾಮ ಜಾಸ್ತಿಯಂತೆ. ಏಕೆಂದರೆ ವೈನ್ ನಿಂದ ಸ್ತನ ಕ್ಯಾನ್ಸರ್ ಬರುವ ಸಂಭವ ಹೆಚ್ಚಂತೆ. ಏನೇ ಆಗಲಿ ಮದ್ಯದಿಂದ ಏನಾದರೊಂದು ಅಪಾಯ […]

Advertisement

Wordpress Social Share Plugin powered by Ultimatelysocial