ರಥೋತ್ಸವದ ವೇಳೆ ದುರಂತ: ಭಕ್ತರ ತಳ್ಳಾಟ – ಚಕ್ರಕ್ಕೆ ಸಿಲುಕಿ ಇಬ್ಬರು ಸಾವು

ಚಾಮರಾಜನಗರ : ಗುಂಡ್ಲುಪೇಟೆಯ ಪಾರ್ವತಾಂಭೆ ರಥೋತ್ಸವದ ವೇಳೆ ಭಕ್ತರ ತಳ್ಳಾಟದಿಂದಾಗಿ ಸಂಭವಿಸಿದ ದುರಂತದಿಂದ ಇಬ್ಬರು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಾರ್ವತಿಬೆಟ್ಟದಲ್ಲಿ ನಡೆದಿದೆ.

ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ರಥೋತ್ಸವವನ್ನು ಈ ವರ್ಷ ಮತ್ತೆ ಆರಂಭಿಸಲಾಗಿತ್ತು. ಇಂದು ಅದ್ಧೂರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ರಥೋತ್ಸವ ಆರಂಭವಾಗುತ್ತಿದ್ದಂತೆ ಏಕಾಏಕಿ ಭಕ್ತರ ನಡುವೆ ತಳ್ಳಾಟ ಆರಂಭವಾಗಿದೆ ಪರಿಣಾಮ ರಥದ ಚಕ್ರಕ್ಕೆ ಸಿಲುಕಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದರು. ನೂಕುನುಗ್ಗಲಿನಿಂದಾಗಿ ಜನ ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದಾರೆ. ಈ ವೇಳೆ ಕಾಲ್ತುಳಿತಕ್ಕೆ ಕೆಲವರು ಸಿಲುಕಿದ್ದಾರೆ. ಈ ಪೈಕಿ ಕಂದೇಗಾಲದ ಸರ್ಪಭೂಷಣ ರಥದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದರೆ,

ಕಬ್ಬಹಳ್ಳಿ ಗ್ರಾಮದ ಸ್ವಾಮಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೋರ್ವ ಗಾಯಳು ಮಹದೇವಣ್ಣ ಎಂಬುವರಿಗೆ ತೊಡೆಯ ಮೂಳೆ ಮುರಿತವಾಗಿದ್ದು ಕೂಡಲೇ ಗಾಯಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ವರ್ಷಗಳ ನಂತರ ನಡೆದ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿ ನೂಕುನುಗ್ಗಲು ಉಂಟಾದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಸರ್ಕಾರ

Mon May 16 , 2022
ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಸೋಮವಾರ ಘೋಷಣೆ ಮಾಡಿದೆ. ಅಲ್ಲದೆ, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರುವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಮತ್ತು ಅವಧಿ ಮುಕ್ತಾಯವಾಗಿರುವ ಒಂದು ನಗರ ಸ್ಥಳೀಯ ಸಂಸ್ಥೆಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾಗಿರುವ ಖಾಲಿ ಸ್ಥಾನಗಳಿಗೆ ಉಪ ಚುನಾವಣೆಯನ್ನು ಸಹ ಚುನಾವಣಾ ಆಯೋಗ ಘೋಷಿಸಿದೆ.   ಚುನಾವಣಾ ಆಯೋಗ […]

Advertisement

Wordpress Social Share Plugin powered by Ultimatelysocial