‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ನಟನೆಯ ‘ಗಣ’ ಸಿನಿಮಾ

 

‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್‌ ದೇವರಾಜ್ ಅವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈಚೆಗಷ್ಟೇ ಅವರ ‘ಅಬ್ಬರ’ ಸಿನಿಮಾ ತೆರೆಗೆ ಬಂದಿತ್ತು. ಸದ್ಯ ‘ವೀರಂ’ ತೆರೆಗೆ ಬರಲು ರೆಡಿ ಆಗಿದೆ. ‘ಮಮ್ಮಿ’ ಲೋಹಿತ್ ನಿರ್ದೇಶನದ ‘ಮಾಫಿಯಾ’ ಸಿನಿಮಾದಲ್ಲೂ ಪ್ರಜ್ವಲ್ ಇದ್ದಾರೆ. ಈ ಮಧ್ಯೆ ಪ್ರಜ್ವಲ್ ನಟನೆಯ ‘ಗಣ’ ಸಿನಿಮಾದ ಶೂಟಿಂಗ್ ಕೂಡ ಮುಕ್ತಾಯಗೊಂಡಿದೆ. ಈ ವರ್ಷದ ಆರಂಭದಲ್ಲಿ ಶೂಟಿಂಗ್ ಆರಂಭಿಸಿದ್ದ ಚಿತ್ರತಂಡ, ಇದೀಗ ಪೂರ್ಣ ಚಿತ್ರೀಕರಣ ಮುಗಿಸಿದೆ.’ಗಣ’ ಚಿತ್ರಕ್ಕೆ ಬೆಂಗಳೂರು ಹಾಗೂ ಮೈಸೂರಿನಲ್ಲಿ 80 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಇದೀಗ ಚಿತ್ರೀಕರಣೋತ್ತರ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿ ಆಗಲಿದೆ. ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರಬೇಕು ಎಂಬುದು ನಿರ್ದೇಶಕ ಹರಿಪ್ರಸಾದ್ ಜಕ್ಕ ಅವರ ಪ್ಲ್ಯಾನ್ ಆಗಿದೆ. ‘ನೆನೊಕ್ಕಡೇನೆ’, ‘100% ಲವ್’ ಮುಂತಾದ ಸಿನಿಮಾಗಳಿಗೆ ಸುಕುಮಾರ್ ಜೊತೆಗೆ ರೈಟರ್‌ ಆಗಿ ಕೆಲಸ ಮಾಡಿರುವ ಹರಿ ಪ್ರಸಾದ್, ತೆಲುಗಿನಲ್ಲಿ ಬೇಡಿಕೆಯ ಸ್ಕ್ರಿಪ್ಟ್‌ ರೈಟರ್ ಆಗಿದ್ದಾರೆ. ಎರಡು ಸಿನಿಮಾಗಳಿಗೆ ನಿರ್ದೇಶನವನ್ನೂ ಮಾಡಿರುವ ಹರಿ ಪ್ರಸಾದ್ ಜಕ್ಕ ಅವರು ಇದೇ ಮೊದಲ ಬಾರಿಗೆ ಕನ್ನಡಕ್ಕೆ ಎಂಟ್ರಿ ನೀಡಿದ್ದಾರೆ. ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.ವಿಭಿನ್ನ ಕಥಾಹಂದರ ಹೊಂದಿರುವ ‘ಗಣ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರಿಗೆ ಹೊಸ ಲುಕ್ ಇದೆಯಂತೆ. ಪ್ರಜ್ವಲ್ ಎದುರು ಯಶಾ ಶಿವಕುಮಾರ್ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಿಶಾಲ್ ಹೆಗ್ಡೆ, ವೇದಿಕಾ ಕುಮಾರ್, ಮಾಸ್ಟರ್ ರಘುನಂದನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಶಿವರಾಜ್ ಕೆ.ಆರ್. ಪೇಟೆ, ಕೃಷಿ ತಾಪಂಡ, ಸಂಪತ್ ರಾಜ್, ರವಿ ಕಾಳೆ, ರಮೇಶ್ ಭಟ್, ಉಮೇಶ್, ಸಿದ್ಲಿಂಗು ಶ್ರೀಧರ್, ಬಾಬು ಹಿರಣ್ಣಯ್ಯ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಸವೇಶ್ವರ ನಗರ ಶಾಲೆಗೆ ಬಾಂಬ್ ಬೆದರಿಕೆ.

Fri Jan 6 , 2023
ಬಸವೇಶ್ವರ ನಗರದ ನ್ಯಾಷನಲ್ ಸ್ಕೂಲ್ ಗೆ ಬೆದರಿಕೆ ಕರೆ.ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರ ಬೇಟಿ. ಬಾಂಬ್ ಸ್ಕ್ವಾಡ್,ಶ್ವಾನ ದಳದಿಂದ ಸ್ಥಳ ಪರಿಶೀಲನೆ. ಮಕ್ಕಳನ್ನ ಸುರಕ್ಷಿತ ಸ್ಥಳದಲ್ಲಿರಿಸಿ ಪರಿಶೀಲನೆ. ಶಾಲಾ ಆವರಣ ಮತ್ತು ಕೊಠಡಿಯಲ್ಲಿ ಪರಿಶೀಲನೆ. ತನಿಖೆ ನಡೆಸುತ್ತಿರುವ ಬಸವೇಶ್ವರ ನಗರ ಪೊಲೀಸರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial