ದಕ್ಷಿಣ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಕೊಡಗು: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮತ್ತೆ ಸಂಭವಿಸಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಶುಕ್ರವಾರ ರಾತ್ರಿ 1 ರಿಂದ 1.40ರ ಅವಧಿಯಲ್ಲಿ ಸಂಪಾಜೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ.

ಒಂದೇ ವಾರದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಶುಕ್ರವಾರ ತಡರಾತ್ರಿ ಭೂಕಂಪನದ ಅನುಭವವಾಗಿರುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ದೂರು ಬಂದಿದೆ. ಇದನ್ನು ಪರಿಶೀಲಿಸಿದಾಗ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ‌ ಕೇಂದ್ರ, ಬೆಂಗಳೂರು ಇವರ ಮಾಹಿತಿಯ ಪ್ರಕಾರ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ 5.2 ಕಿ.ಮೀ. ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿ.ಮೀ. ಆಳದಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 1.8 ಎಂದು ದಾಖಲಾಗಿದೆ ಎಂದು ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ತಿಳಿಸಿದ್ದಾರೆ.

ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ ಹಲವು ಸೆಕೆಂಡ್ ಸಮಯ ಕಂಪನದ ಅನುಭವವಾಗಿದೆ. ಕೊಡಗು‌ ಜಿಲ್ಲೆ‌ Zone III ಗೆ ಬರುತ್ತದೆ. ಈ ಭೂಕಂಪನವನ್ನು ವೈಜ್ಞಾನಿಕವಾಗಿ ಪರಿಶೀಲಿಸಿದಾಗ ಸುಮಾರು 30 ಕಿ.ಮೀ. ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯ ಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ‌ ವಸ್ತು ಅಲುಗಾಡಬಹುದು. ಜನತೆ ಗಾಬರಿ ಪಡುವ ಅವಶ್ಯಕತೆಯಿಲ್ಲ ಎಂದು ಆರ್.ಎಂ.ಅನನ್ಯ ವಾಸುದೇವ್ ತಿಳಿಸಿದ್ದಾರೆ. ಮತ್ತೆ ಭೂಕಂಪದ ಅನುಭವ ಆದರೆ ಹಾಗೂ ಭೂಮಿಯಲ್ಲಿ ಬಿರುಕು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272- 221077, 221099ಕ್ಕೆ ಕರೆ ಮಾಡಿ ಮಾಹಿತಿ ಕೊಡಬೇಕಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೀರೋ ಆಗಿರುವುದು ಎಲ್ಲರಿಗೂ ಇಷ್ಟ. ಆದರೆ ಈಗ ಜಾನ್​ ಅಬ್ರಾಹಂ ವಿಲನ್​ ಆಗಿದ್ದಾರೆ.

Fri Jul 1 , 2022
ಹೀರೋ ಆಗಿರುವುದು ಎಲ್ಲರಿಗೂ ಇಷ್ಟ. ಆದರೆ ಈಗ ಜಾನ್​ ಅಬ್ರಾಹಂ ವಿಲನ್​ ಆಗಿದ್ದಾರೆ. ಯಾಕೆ ಹೀಗಾಯ್ತು ಎಂಬ ಬಗ್ಗೆ ಅವರು ಮಾತನಾಡಿದ್ದಾರೆ.ನಟ ಜಾನ್​ ಅಬ್ರಾಹಂ ಅವರು ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಂದ ಸುದ್ದಿ ಆಗಿದ್ದಾರೆ. ದಕ್ಷಿಣದ ಸಿನಿಮಾಗಳ ಬಗ್ಗೆ, ಒಟಿಟಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಅವರು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದ್ದರು. ಈಗ ಜಾನ್​ ಅಬ್ರಾಹಂ ನಟಿಸಿರುವ ‘ಏಕ್​ ವಿಲನ್​ ರಿಟರ್ನ್ಸ್​​’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಹಿಂದಿ ಸಿನಿಪ್ರಿಯರ […]

Advertisement

Wordpress Social Share Plugin powered by Ultimatelysocial