ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ..!

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು.

ಅಲ್ಲದೆ ಸಮೀಕ್ಷೆ ಒಂದರಲ್ಲಿ ಶೇಕಡ 70ಕ್ಕೂ ಅಧಿಕ ಮಕ್ಕಳು ಮೊಟ್ಟೆ ನೀಡಲು ಬೇಡಿಕೆ ಇಟ್ಟಿದ್ದು, ಕಂಡುಬಂದಿತ್ತು.

ಇದರ ಮಧ್ಯೆ ಆಡಳಿತ ಸುಧಾರಣಾ ಆಯೋಗ ಮತ್ತೊಂದು ಮಹತ್ವದ ಶಿಫಾರಸ್ಸು ಮಾಡಿದ್ದು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ನೀಡುವಂತೆ ತಿಳಿಸಲಾಗಿದೆ.

ಶುಕ್ರವಾರದಂದು ಟಿ.ಎಂ. ವಿಜಯ ಭಾಸ್ಕರ್ ಅವರು ಈ ಶಿಫಾರಸ್ಸನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ನೀಡಬಹುದು ಎಂದು ತಿಳಿಸಿದೆ. ಪ್ರಸ್ತುತ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ಮೊಟ್ಟೆ ನೀಡಲಾಗುತ್ತಿದ್ದು, ಇದನ್ನು ಐದು ಮೊಟ್ಟೆಗೆ ಹೆಚ್ಚಿಸಲು ಸಲಹೆ ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಂದು ತಿಂಗಳು ಸಕ್ಕರೆಗೆ 'ನೋ' ಹೇಳಿ.

Sat Feb 4 , 2023
ಅನೇಕ ವಿಧಗಳಲ್ಲಿ, ನಮ್ಮ ಆಹಾರವು ಸಕ್ಕರೆಯಿಂದ ತುಂಬಿರುತ್ತದೆ. ಅದು ನಮ್ಮ ತಿಂಡಿಗಳು, ಪಾನೀಯಗಳು, ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹಣ್ಣುಗಳಲ್ಲಿರಬಹುದು. ಕೆಲವು ವಿಧದ ಸಕ್ಕರೆ ದೇಹಕ್ಕೆ ಅತ್ಯಗತ್ಯವಾದರೂ, ಹೆಚ್ಚು ಸಂಸ್ಕರಿಸಿದ ಸಕ್ಕರೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ನೀವು ಗುಪ್ತ ಸಕ್ಕರೆಗಳನ್ನು ಹೊಂದಿರುವ ಆಹಾರವನ್ನು ಸೇವಿಸಿದಾಗ, ಕ್ಯಾಲೋರಿಗಳು ಹೆಚ್ಚಾಗುತ್ತವೆ. ಪರಿಣಾಮವಾಗಿ, ಸ್ಥೂಲಕಾಯತೆ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗದಂತಹ ವಿವಿಧ ಚಯಾಪಚಯ ಅಸ್ವಸ್ಥತೆಗಳು ಸಂಭವಿಸುವ ಸಾಧ್ಯತೆಯಿದೆ ಮತ್ತು ಹೆಚ್ಚುವರಿ ಸಕ್ಕರೆಯನ್ನು ಕಡಿಮೆ […]

Advertisement

Wordpress Social Share Plugin powered by Ultimatelysocial