13 ಜಿಲ್ಲೆಗಳಲ್ಲಿಂದು ಕೊರೋನಾ ಶೂನ್ಯ: ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್.? ಇಲ್ಲಿದೆ ವಿವರ

13 ಜಿಲ್ಲೆಗಳಲ್ಲಿಂದು ಕೊರೋನಾ ಶೂನ್ಯ: ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್.? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 299 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 318 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7117 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.23 ರಷ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 30,03,564 ಕ್ಕೆ ಏರಿಕೆಯಾಗಿದೆ.

ಇದುವರೆಗೆ 38,301 ಜನ ಸೋಂಕಿತರ ಮೃತಪಟ್ಟಿದ್ದಾರೆ. 29,58,117 ಜನ ಗುಣಮುಖರಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 210 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 207 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5742 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 210, ದಕ್ಷಿಣಕನ್ನಡ 12, ಉತ್ತರಕನ್ನಡ 13 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎನ್‌ಡಿಟಿಎಲ್‌ ಮೇಲಿನ ಅಮಾನತು ವಾಪಸ್

Thu Dec 23 , 2021
ನವದೆಹಲಿ: ಉದ್ದೀಪನ ಮದ್ದು ಪರೀಕ್ಷೆಯ ರಾಷ್ಟ್ರೀಯ ಪ್ರಯೋಗಾಲಯದ (ಎನ್‌ಡಿಟಿಎಲ್‌) ಮೇಲೆ ವಿಧಿಸಿದ್ದ ಅಮಾನತನ್ನು ವಿಶ್ವ ಉದ್ದೀಪನ ಮದ್ದು ತಡೆ ಘಟಕ (ವಾಡಾ) ತೆರವುಗೊಳಿಸಿದೆ. ಜಾಗತಿಕ ಗುಣಮಟ್ಟ ಕಾಪಾಡಿಕೊಳ್ಳಲು ವಿಫಲವಾಗಿದೆ ಎಂದು 2019ರಲ್ಲಿ ಎನ್‌ಡಿಟಿಎಲ್‌ ಮಾನ್ಯತೆಯನ್ನು ಅಮಾನತಿನಲ್ಲಿಡಲಾಗಿತ್ತು. ಇದೀಗ ಪ್ರಯೋಗಾಲಯವು ಪರೀಕ್ಷೆಗೆ ಮುಕ್ತವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಟ್ವೀಟ್ ಮಾಡಿದ್ದಾರೆ. ‘ಜಾಗತಿಕ ಮಾನದಂಡಗಳನ್ನು ಪಾಲಿಸಿಕೊಂಡು ಪ್ರಯೋಗಾಲಯದ ಕೊರತೆಗಳನ್ನು ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರ ಸತತ ಪ್ರಯತ್ನ ನಡೆಸಿತ್ತು. ಮತ್ತೆ […]

Advertisement

Wordpress Social Share Plugin powered by Ultimatelysocial