ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್‌ ಸೇಠ್‌- ಅಭಿಮಾನಿಯೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಹೈಡ್ರಾಮ.

 

ಮೈಸೂರು ಭಾಗದ ಕಾಂಗ್ರೆಸ್‌ ಹಿರಿಯ ಮುಖಂಡ ಶಾಸಕ ತನ್ವೀರ್ ಸೇಠ್ ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಜಿಲ್ಲೆಯ ಎನ್‌ ಆರ್‌ ಕ್ಷೇತ್ರದ ಸೋಲಿಲ್ಲದ ಸರದಾರ ಎಂಬ ಖ್ಯಾತಿಯನ್ನು ತನ್ವೀರ್‌ ಸೇಠ್‌ ಹೊಂದಿದ್ದರು. ಈ ಮೂಲಕ ಕಾಂಗ್ರೆಸ್‌ಗೆ ಮೈಸೂರು ಭಾಗದಲ್ಲಿ ಹಿನ್ನೆಡೆಯಾಗುವ ಸಾಧ್ಯತೆಗಳಿವೆ.ಚುನಾವಣಾ ರಾಜಕೀಯಕ್ಕೆ ನಿವೃತ್ತಿಗೆ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ನೀಡಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.ಮಂಗಳವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, “ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅನಾರೋಗ್ಯ ಕಾರಣದಿಂದ ನಾನು ಚುನಾವಣೆಯಿಂದ ದೂರ ಉಳಿಯುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷನಾಯಕ ಸಿದ್ಧರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೂ ಪತ್ರ ಬರೆದಿದ್ದೇನೆ” ಎಂದು ತಿಳಿಸಿದರು.ನಾನು ನಿಷ್ಠಾವಂತರ ಕಾಂಗ್ರೆಸ್ ಕಾರ್ಯಕರ್ತ. ನನ್ನ ಕುಟುಂಬದಿಂದ ಯಾರೂ ಚುನಾವಣೆಗೆ ನಿಲ್ಲುವುದಿಲ್ಲ. ಹೀಗಾಗಿ, ಕುಟುಂಬದವರಿಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್ ಕೊಡಿ ಎಂದೂ ಕೇಳಿಲ್ಲ. ವರಿಷ್ಠರು ಯಾರಿಗೆ ಟಿಕೇಟ್‌ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತನ್ವೀರ್ ಸೇಠ್ ಸ್ಪಷ್ಟಪಡಿಸಿದ್ದಾರೆ.ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ ಎಂದು ತನ್ವೀರ್‌ ಸೇಠ್‌ ಹೇಳಿಕೊಂಡಿದ್ದಾರೆ. ಹೀಗಾಗಿ, ಕಾಂಗ್ರೆಸ್‌ ನಾಯಕರು ಕೂಡಾ ಒತ್ತಾಯ ಹೇರಿವ ಸ್ಥಿತಿಯಲ್ಲಿಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾನು ರಾಜಕೀಯ ವಿದಾಯ ಹೇಳ್ತಿಲ್ಲ.

Tue Feb 28 , 2023
ಮುಂಬರುವ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ ಭಾವುಕರಾದರು. ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ ಭಾವುಕರಾದರು. ಚನ್ನಪಟ್ಟಣದಲ್ಲಿ ಮಾತಾಡಿದ ಹೆಚ್.ಡಿ. ಕುಮಾರಸ್ವಾಮಿ.. ನಾನು ರಾಜಕೀಯ ವಿದಾಯ ಹೇಳ್ತಿಲ್ಲ. 2028ರ ವಿಧಾನಸಭೆಗೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನು ನಿಲ್ಲಿಸ್ತೀನಿ. ಆಗ ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕಾಗಬಹುದು. ನಾನು ಯಾವುದೇ […]

Advertisement

Wordpress Social Share Plugin powered by Ultimatelysocial