ಅಖಿಲೇಶ್ ಯಾದವ್  ಚುನಾವಣೆಗೆ ಸ್ಪರ್ಧಿಸುವಂತೆ ಟಿಕಾಯತ್ ಗೆ ಮನವಿ:ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ :ರೈತ ಮುಖಂಡ ರಾಕೇಶ್ ಟಿಕಾಯತ್

ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವಂತೆ ರಾಕೇಶ್ ಟಿಕಾಯತ್ ಅವರಿಗೆ ಮನವಿ ಮಾಡಿದ್ದರು.ಆದರೆ, ಆ ಮನವಿಯನ್ನು ಟಿಕಾಯತ್ ತಿರಸ್ಕರಿಸಿದ್ದಾರೆ.ಈ ಸಂಬಂಧ ಉತ್ತರಪ್ರದೇಶದ ಶಾಮ್ಲಿಯಲ್ಲಿ ಮಾತನಾಡಿರುವ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ. ಆದರೆ, ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ರಾಜ್ಯದ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುವುದರ ವಿರುದ್ಧ ಮತ್ತೇ ಹೋರಾಡುವುದಾಗಿ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ಹಣ ನೀಡುವಂತೆ ನೋಡಿಕೊಳ್ಳಬೇಕು. ಇದು ಸರ್ಕಾರದ ಜವಾಬ್ದಾರಿಯಾಗಿದೆ. ಹರಿಯಾಣದಲ್ಲಿ ವಿದ್ಯುತ್ ದರ ಎಷ್ಟಿದೆಯೋ ಆ ದರವನ್ನು ಉತ್ತರಪ್ರದೇಶದಲ್ಲೂ ಅಳವಡಿಕೆ ಮಾಡಿಕೊಳ್ಳಬೇಕು. ಶಿಕ್ಷಣ,ನಿರುದ್ಯೋಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆಯೂ ದನಿಯೆತ್ತಲಾಗುತ್ತದೆ ಎಂದಿದ್ದಾರೆ.ಈ ಹಿಂದೆ ರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ. ರಾಜಕೀಯ ಪಕ್ಷಗಳು ತಮ್ಮ ಬ್ಯಾನರ್​ನಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ಬಳಕೆ ಮಾಡಬಾರದು ಎಂದು ಹೇಳಿದ್ದರು. ಹಾಗೆ ಹೋರಾಟ ಮುಂದುವರೆಸುವುದಾಗಿಯೂ ಎಚ್ಚರಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಗುರುತು ಪತ್ತೆ

Sun Dec 19 , 2021
ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಗುರುತು ಪತ್ತೆಯಾಗದ ಉಗ್ರಗಾಮಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಎನ್‍ಕೌಂಟರ್ ನಡೆಯಿತು ಎಂದು ಅವರು ಹೇಳಿದ್ದಾರೆ.ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಮುತ್ತಿಗೆ ಮತ್ತು ಶೋಧಕಾರ್ಯಾಚರಣೆ ಆರಂಭಿಸಿದ್ದವು.ಆಗ ಉಗ್ರರೊಂದಿಗೆ ಗುಂಡಿನ ಚಕಮಕಿ ಉಂಟಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ಹತ ಉಗ್ರನ ಗುರುತು ಮತ್ತು ಆತ ಯಾವ ಉಗ್ರಗಾಮಿ ಸಂಘಟನೆಗೆ ಸೇರಿದವನು ಎಂಬುದು […]

Advertisement

Wordpress Social Share Plugin powered by Ultimatelysocial