ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

ವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುವುದಿಲ್ಲ. ಕೂಡಲೇ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಮೇಯರ್ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 22ರಂದು ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದ್ದು, ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ಸಮ್ಮತಿ ಸೂಚಿಸಿದ್ದಾರೆ. ಮೇ 22ರಂದು ಮೇಯರ್ ಆಯ್ಕೆಯಾಗಲಿದ್ದು, ನಂತರ ಮೇಯರ್ ಅವರಿಂದಲೇ ಉಪಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಮೂರ್ನಾಲ್ಕು ಬಾರಿ ಮೇಯರ್ ಆಯ್ಕೆ ಮುಂದೂಡಲಾಗಿತ್ತು. ನಾಮನಿರ್ದೇಶಿತರಿಗೆ ಮತದಾನ ಹಕ್ಕು ವಿಚಾರವಾಗಿ ಗೊಂದಲ ಉಂಟಾಗಿತ್ತು. ಸುಪ್ರೀಂಕೋರ್ಟ್ ಆದೇಶ ನೀಡಿ ನಾಮನಿರ್ದೇಶಕ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊಡೇಕಲ್ ಕಾಲಜ್ಞಾನಿ ಬಸವಣ್ಣನ ಭವಿಷ್ಯದ ನುಡಿ*

Sun Feb 19 , 2023
ಕೊಡೇಕಲ್ ಕಾಲಜ್ಞಾನಿ ಬಸವಣ್ಣನ ಭವಿಷ್ಯದ ನುಡಿ* ಶಿವರಾತ್ರಿ ದಿನ ನುಡಿದ ಭವಿಷ್ಯದ ವಚನದ ನುಡಿ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿರುವ ಕಾಲಜ್ಞಾನಿ ಬಸವಣ್ಣನ ದೇವಸ್ಥಾನ, ಕಾಲಜ್ಞಾನಿ ಬಸವಣ್ಣನವರ ವಚನಗಳನ್ನೆ ಪ್ರತಿ ವರ್ಷ ಶಿವರಾತ್ರಿ ಹಬ್ಬದ ದಿನ ನುಡಿಯುತ್ತಾರೆ, ಶಿವರಾತ್ರಿ ನುಡಿಯಲ್ಲಿ ಪಕ್ಷಾಂತರಿಗಳಿಗೆ ಎಚ್ಚರಿಕೆ” ನುಡಿದಂತೆ ನಡೆಯುವರಿಗೆ ಮತ್ತೆ ಅಧಿಕಾರದ ಗದ್ದುಗೆ, ವಚನ ನುಡಿ ಪುಣ್ಯ ಸ್ತ್ರಿಯಳ ಒಲುಮೆ ಬಣ್ಣ ಬಜನೆ ಅಲ್ಲ* ತನ್ನ ಪುರುಷನೆ ತನಗೆ ಗತಿ […]

Advertisement

Wordpress Social Share Plugin powered by Ultimatelysocial