ELECTRIC CAR:ಇಎಕ್ಸ್‌ಯುವಿ300 ಬಿಡುಗಡೆ;

ಮಹೀಂದ್ರಾ(Mahindra) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ಮುಂಬರುವ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ700, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ, ಥಾರ್ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಮಾದರಿಗಳು ಸಹ ಮಾರುಕಟ್ಟೆ ಪ್ರವೇಶಿಸುತ್ತಿವೆ.

ಮಹೀಂದ್ರಾ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಒಟ್ಟು 13 ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಯೋಜನೆ ಅಡಿ ಎಲೆಕ್ಟ್ರಿಕ್ ಮಾದರಿಯಾದ ಇಎಕ್ಸ್‌ಯುವಿ300 ಮಾದರಿಯು ಕೂಡಾ ಬಿಡುಗಡೆಯಾಗಲಿದೆ.

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಹೊಸ ಇಎಕ್ಸ್‌ಯುವಿ(eXUV300) ಕಾರನ್ನು ಮಾರುಕಟ್ಟೆಯಲ್ಲಿನ ಸನ್ನಿವೇಶವನ್ನು ಆಧರಿಸಿ ಇದೀಗ ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಹೊಸ ಕಾರು ಈ ವರ್ಷಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಂಪನಿಯು ಇಎಕ್ಸ್‌ಯುವಿ300 ಬಿಡುಗಡೆಗೂ ಮುನ್ನ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಇವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿ ಟಾಟಾ ನೆಕ್ಸಾನ್ ಇವಿ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಎಂಟು ಎಲೆಕ್ಟ್ರಿಕ್ ಕಾರುಗಳೊಂದಿಗೆ ಐದು ಸಾಮಾನ್ಯ ಕಾರು ಮಾದರಿಗಳು ಸಹ ಬಿಡುಗಡೆಯಾಗಲಿದ್ದು, ಎಲೆಕ್ಟ್ರಿಕ್ ಕಾರುಗಳು 2022ರ ಮಧ್ಯಂತರದಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ನಂತರ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿದ್ದು, ತದನಂತರ ಮಾರುಕಟ್ಟೆಯಲ್ಲಿ ಇತರೆ ಕಾರುಗಳ ಮಾದರಿಗಳ ಎಲೆಕ್ಟ್ರಿಕ್ ಆವೃತ್ತಿಗಳನ್ನು ಪರಿಚಯಿಸಲಿದೆ.

ಎಲೆಕ್ಟ್ರಿಕ್ ಕಾರು ಮಾದರಿಗಳಾಗಿ ಹೊಸದಾಗಿ ಡೀಸೆಲ್ ಕಾರುಗಳ ಅಭಿವೃದ್ದಿಯನ್ನು ಹಂತ-ಹಂತವಾಗಿ ಕಡಿತಗೊಳಿಸುತ್ತಿದ್ದು, ಎಲೆಕ್ಟ್ರಿಕ್ ಕಾರು ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಡೀಸೆಲ್ ಕಾರುಗಳನ್ನು ತಗ್ಗಿಸಲು ಪೆಟ್ರೋಲ್ ಹೈಬ್ರಿಡ್ ಕಾರು ಮಾದರಿಗಳನ್ನು ಸಹ ಅಭಿವೃದ್ದಿಪಡಿಸುತ್ತಿದ್ದು, ಇಎಕ್ಸ್‌ಯುವಿ300, ಇಕೆಯುವಿ100 ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲಿವೆ.

ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 380 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಟಾಟಾ ನೆಕ್ಸಾನ್ ಇವಿ ಬೆಲೆಗೆ ಸರಿಸಮನಾಗಿ ಬಿಡುಗಡೆ ಹೊಂದಬಹುದಾಗಿದ್ದು, ಹೊಸ ಕಾರು ಎಂಜಿ ಜೆಡ್‌ಎಸ್ ಇವಿ ಮಾದರಿಗೂ ಸಹ ಪೈಪೋಟಿ ನೀಡಲಿದೆ.

ಇಕೆಯುವಿ100 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆ ಹೊಂದಿದ್ದು, 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಕನಿಷ್ಠ 150 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ. ಹಾಗೆಯೇ ಇಎಕ್ಸ್‌ಯುವಿ 300 ಮಾದರಿಯು ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್‌ನೊಂದಿಗೆ ಗರಿಷ್ಠ ಮೈಲೇಜ್ ಪ್ರೇರಣೆ ಹೊಂದಿಲಿದ್ದು, ಇದು 2022ರ ಕೊನೆಯಲ್ಲಿ ಇಲ್ಲವೇ 2023ರ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ವಾಣಿಜ್ಯ ವಾಹನ ಮಾರಾಟದಲ್ಲಿ ಮುಂಚೂಣಿ ಸಾಧಿಸಿರುವ ಮಹೀಂದ್ರಾ ಕಂಪನಿಯ ಮಹೀಂದ್ರಾ ಎಲೆಕ್ಟ್ರಿಕ್ ವಿಭಾಗವು ಮತ್ತಷ್ಟು ಹೊಸ ಇವಿ ವಾಹನ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ವಾಣಿಜ್ಯ ವಾಹನಗಳ ಮಾದರಿಗಳಂತೆಯೇ ಪ್ರಯಾಣಿಕರ ಎಲೆಕ್ಟ್ರಿಕ್ ವಾಹನ ಮಾದರಿಯ ಮಾರಾಟದಲ್ಲೂ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ. 3 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

ಮಹೀಂದ್ರಾ ಕಂಪನಿಯು ಕೇವಲ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾತ್ರವಲ್ಲದೆ ಸಂಶೋಧನೆ, ವಿಶ್ವಾದ್ಯಂತ ನೂರಾರು ಇವಿ ಸ್ಟಾರ್ಟ ಅಪ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಿದ್ದು, ಭವಿಷ್ಯದ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಮಹತ್ವದ ಪಾತ್ರವಹಿಸಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

MARUTHI:ಭಾರತೀಯ ಮಾರುಕಟ್ಟೆಯಲ್ಲಿ ಕುಸಿತ ಕಂಡ ಮಾರುತಿ ಸುಜುಕಿ;

Wed Feb 2 , 2022
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ 2022ರ ಜನವರಿ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು 154,379 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. ಇಂಡೋ-ಜಪಾನೀಸ್ ಕಾರು ತಯಾರಕರು ವರ್ಷದಿಂದ ವರ್ಷಕ್ಕೆ ಸುಮಾರು ಶೇ.4 ರಷ್ಟು ಕುಸಿತವನ್ನು ಕಂಡಿದ್ದಾರೆ. ಇನ್ನು ಮಾರುತಿ ಸುಜುಕಿ ಕಂಪನಿಯು 2021ರ ಡಿಸೆಂಬರ್ ತಿಂಗಳಿನಲ್ಲಿ 153,149 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದಾರೆ. ಇದನ್ನು ಮಾರಾಟದಲ್ಲಿನ ತಿಂಗಳ-ತಿಂಗಳ ವ್ಯತ್ಯಾಸವು ಸಮತಟ್ಟಾಗಿದೆ. ಎಲೆಕ್ಟ್ರಾನಿಕ್ ಯುನಿಟ್ […]

Advertisement

Wordpress Social Share Plugin powered by Ultimatelysocial