ಲಾರಿ ಡಿಕ್ಕಿ ಹೆಣ್ಣಾನೆ ಸಾವು :ಲಾರಿ ಚಾಲಕ ಹಾಗೂ ಕ್ಲೀನರ್ ಬಂಧನ!

ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ..ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ‌ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ ಮದ್ದೂರು ವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ರಾತ್ರಿ 9 ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ‌ಮೊದಲೇ ಈ ಘಟನೆ ನಡೆದಿದೆ.ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಾದ ಬಳಿಕ ವಾಹನ ಅಪಘಾತದಲ್ಲಿ ದೊಡ್ಡ ಪ್ರಾಣಿಯೊಂದು ಇದೇ ಮೊದಲಾಗಿದೆ ಪರಿಸರವಾದಿಗಳ‌ ಆಕ್ರೋಶಕ್ಕೆ ಕಾರಣವಾಗಿದೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಾನಿಗಳಿಂದ ತಟ್ಟೆ ಲೋಟ ವಿತರಣೆ.

Wed Dec 14 , 2022
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮದ್ಯಾಹ್ನ ಬಿಸಿಯೂಟ ಸೇವನೆಗೆ ಅನುಕೂಲವಾಗಲೆಂದು ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ತಟ್ಟೆ ಲೋಟ ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಶಾಲಾ ಸಿಬ್ಬಂದಿಯಿಂದ ದಾನಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿರುವ ಆದರ್ಶ ಶಾಲೆಯ ವಿದ್ಯಾರ್ಥಿಗಳಿಗೆ ತಾಲ್ಲೂಕಿನ ಸಮಾಜ ಸೇವಕರು ಹಾಗೂ ದಾನಿಗಳಾದ ನಾರಾಯಣಸ್ವಾಮಿ ರವರು ತಟ್ಟೆ ಲೋಟ ಹಾಗೂ ಸಿಹಿ ಹಂಚಿ ದಾನಿಗಳಾದ ನಾರಾಯಣಸ್ವಾಮಿ ರವರು ಮಾತನಾಡಿ ವಿದ್ಯೆಯನ್ನು ಹಣದಿಂದ ಸಂಪಾದನೆ ಮಾಡಲಾಗುವದಿಲ್ಲಾ […]

Advertisement

Wordpress Social Share Plugin powered by Ultimatelysocial