ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಪ್ರವೇಶಕ್ಕೆ ನಿರ್ಬಂಧ ಇಲ್ಲ: ಶಿಕ್ಷಣ ಇಲಾಖೆ

 ಬೆಂಗಳೂರು: ರಾಜ್ಯ ಸರ್ಕಾರದ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಯಾವುದೇ ರೀತಿಯ ನಿರ್ಬಂಧ ವಿಧಿಸದಿರಲು ನಿರ್ಧರಿಸಿರುವ ಶಿಕ್ಷಣ ಇಲಾಖೆ, ಪ್ರವೇಶ ಕಲ್ಪಿಸುವಾಗ ಮೂಲಸೌಕರ್ಯಗಳನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ಸೂಚಿಸಿದೆ.2022-23ನೇ ಶೈಕ್ಷಣಿಕ ವರ್ಷದಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸದ ಕಾರಣ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.ಜತೆಗೆ, ಕೋವಿಡ್‌ನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಕಳುಹಿಸಲು ಬಯಸುವವರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.’ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅವಕಾಶ ಕಲ್ಪಿಸಬೇಕು ಎನ್ನುವ ಬೇಡಿಕೆಯನ್ನು ಹಲವು ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಂದ ಬಂದಿದೆ. ಮೂಲಸೌಕರ್ಯಗಳು ಲಭ್ಯ ಇರುವ ಶಾಲೆಗಳಲ್ಲಿ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅವಕಾಶ ನೀಡಲಾಗುವುದು. ಶಿಕ್ಷಕರ ಕೊರತೆ ಇದ್ದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬಹುದು. ಶಾಲಾಭಿವೃದ್ಧಿ ಸಮಿತಿಗಳು ಈ ಬಗ್ಗೆ ಬಿಇಒಗಳಿಗೆ ಮನವಿ ಸಲ್ಲಿಸಬಹುದು’ ಎಂದು ತಿಳಿಸಿದ್ದಾರೆ.2019-20ರಲ್ಲಿ ರಾಜ್ಯ ಸರ್ಕಾರ 1,001 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸಿತ್ತು. ನಂತರ, 276 ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಲಾಗಿದೆ. ಒಟ್ಟಾರೆಯಾಗಿ ಪ್ರಸ್ತುತ, 2,401 ಇಂಗ್ಲಿಷ್‌ ಮಾಧ್ಯಮ ಸರ್ಕಾರಿ ಶಾಲೆಗಳಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ​ ನೀಲ್​! ಕೆಜಿಎಫ್​ ನಿರ್ದೇಶಕರ ವಿರುದ್ಧ ಅಭಿಮಾನಿಗಳ ಅಸಮಾಧಾನ

Thu May 26 , 2022
ಹೈದರಾಬಾದ್​: ಕೆಜಿಎಫ್​ ಚಾಪ್ಟರ್​ 1 ಮತ್ತು 2 ಅದ್ಭುತ ಯಶಸ್ಸಿನ ಬಳಿಕ ನಿರ್ದೇಶಕ ಪ್ರಶಾಂತ್​ ನೀಲ್​ಗೆ ಹೆಚ್ಚು ಬೇಡಿಕೆ ಬಂದಿದೆ. ನಮಗೆ ಸಿನಿಮಾ ಮಾಡಿಕೊಡಿ ಅಂತಾ ಸ್ಟಾರ್​ ನಟರೇ ಪ್ರಶಾಂತ್​ ನೀಲ್​ ಹಿಂದೆ ಬಿದ್ದಿದ್ದಾರೆ. ಈಗಾಗಲೇ ಟಾಲಿವುಡ್​ನ ಇಬ್ಬರು ಸ್ಟಾರ್​ ನಟರಿಗೆ ನೀಲ್​ ಆಯಕ್ಷನ್​ ಕಟ್​ ಹೇಳುತ್ತಿದ್ದಾರೆ.ಪ್ರಭಾಸ್​ ಅಭಿನಯದ ಸಲಾರ್​ ಮತ್ತು ಜೂನಿಯರ್​ ಎನ್​ಟಿಆರ್​ ಅಭಿನಯದ ಇನ್ನೂ ಹೆಸರಿಡದ ಚಿತ್ರಕ್ಕೆ ನೀಲ್​ ನಿರ್ದೇಶನವಿರಲಿದೆ. ಈಗಾಗಲೇ ಸಲಾರ್​ ಚಿತ್ರದ ಚಿತ್ರೀಕರಣ ಅರ್ಧ […]

Advertisement

Wordpress Social Share Plugin powered by Ultimatelysocial