ಸಚಿವ ಈಶ್ವರಪ್ಪ; ಭಾವಚಿತ್ರ ಹರಿದು ಆಕ್ರೋಶ; ಕೈ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು/ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ರಾಜಧಾನಿ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

 

ಹಿಜಾಬ್ ಸಂಘರ್ಷದ ವೇಳೆ ಮಾತನಾಡುತ್ತಾ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದರು. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ಆರಂಭವಾಗಿದೆ.

ಇನ್ನೊಂದೆಡೆ ಸಚಿವ ಈಶ್ವರಪ್ಪ ಅವರ ಭಾವಚಿತ್ರ ಹರಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೊಂದೆಡೆ ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಗಾಂಧಿಭವನ ರಸ್ತೆಯಲ್ಲಿರುವ ಸಚಿವ ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಂದೇ ದಿನ 541 ಜನ ಮಹಾಮಾರಿಗೆ ಬಲಿ; ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಹೆಚ್ಚಳ;

Thu Feb 17 , 2022
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದರೂ ಇಂದು ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 30,757 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದ್ದು, 24 ಗಂಟೆಯಲ್ಲಿ 541 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 3,32,918 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 67,538 ಜನರು ಕೋವಿಡ್ ನಿಂದ […]

Advertisement

Wordpress Social Share Plugin powered by Ultimatelysocial