ಪಂಚಾಯತ್ ಚುನಾವಣೆಯನ್ನು ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಬೆಂಗಳೂರು,ಫೆ.11-ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಸಲು ನಾವು ಪ್ರಸ್ತಾವನೆಯನ್ನು ಕಳುಹಿಸಿದ್ದೆವು. ಕ್ಷೇತ್ರ ವಿಂಗಡಣೆ, ಮೀಸಲಾತಿ ಬಗ್ಗೆ ಮಸೂದೆಯನ್ನು ತರಲಾಗಿತ್ತು.ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿನಾರಾಯಣ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಎಸ್ಸಿ-ಎಸ್ಟಿಗೆ ಮಾತ್ರ ಮೀಸಲಾತಿ ಮಾತ್ರ ನೀಡಬೇಕಾಗಿದೆ ಎಂದು ಹೇಳಿದರು.ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಕೊಡುವಂತಿಲ್ಲ. ಹೀಗಾಗಿ ಸಾಮಾಣ್ಯ ವರ್ಗದಲ್ಲೇ ಒಬಿಸಿ ಬರುತ್ತವೆ. ಈ ಕುರಿತಂತೆ ಪ್ರತಿಪಕ್ಷಗಳು ಮಾತನಾಡಲಿ. ನಾವು ಕಾನೂನು ಬದ್ದವಾಗಿ ಚುನಾವಣೆ ನಡೆಸಬೇಕೆಂಬ ಅಪೇಕ್ಷೆ ಹೊಂದಿದ್ದೇವೆ ಎಂದು ಹೇಳಿದರು.ಈ ಎಲ್ಲ ಕಾರಣದಿಂದ ಜಿಪಂ, ತಾಪಂ ಚುನಾವಣೆ ಮುಂದಕ್ಕೆ ಹೋಗಿದೆ. ಸುಪ್ರೀಂಕೋರ್ಟ್ ತೀರ್ಪು ಕುರಿತಂತೆ ಪರಿಣಿತರ ಜೊತೆ ಚರ್ಚಿಸಬೇಕು. ಹೀಗಾಗಿ ಸದ್ಯಕ್ಕೆ ಚುನಾವಣೆ ನಡೆಯುತ್ತಿಲ್ಲ ಎಂದರು.ಪರಿಸ್ಥಿತಿ ಶಾಂತವಾಗಿರುವುದ ರಿಂದ ರಾಷ್ಟ್ರ ಧ್ವಜದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಏನು ಉತ್ತರ ಕೊಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

IIFA 2022 COVID ಕಾರಣದಿಂದ ಮೇಗೆ ಮುಂದೂಡಲ್ಪಟ್ಟಿದೆ;

Fri Feb 11 , 2022
IFA ಎಂದೂ ಕರೆಯಲ್ಪಡುವ ಇಂಟರ್ನ್ಯಾಷನಲ್ ಇಂಡಿಯನ್ ಫಿಲ್ಮ್ ಅಕಾಡೆಮಿ ಪ್ರಶಸ್ತಿಗಳು 2022 ಅನ್ನು ಮಾರ್ಚ್ 2022 ರಲ್ಲಿ ನಡೆಸಲು ನಿರ್ಧರಿಸಲಾಗಿತ್ತು, ವೇಗವಾಗಿ ಬದಲಾಗುತ್ತಿರುವ ಸಾರ್ವಜನಿಕ ಆರೋಗ್ಯ ಪರಿಸ್ಥಿತಿ ಮತ್ತು ಜಾಗತಿಕವಾಗಿ COVID-19 ಹರಡುವಿಕೆಯ ನಂತರ ಮುಂದೂಡಲಾಗಿದೆ. ಈವೆಂಟ್‌ನ ಹೊಸ ದಿನಾಂಕಗಳು ಈಗ ಮೇ 20-21. ಆಯೋಜಕರು ಗುರುವಾರ ಹೇಳಿಕೆಯನ್ನು ಬಿಡುಗಡೆ ಮಾಡಿದರು, “ಬಹು ನಿರೀಕ್ಷಿತ IIFA ಪ್ರಶಸ್ತಿಗಳು 2022 ರ 22 ನೇ ಆವೃತ್ತಿಯನ್ನು 20 ಮತ್ತು 21 ರ […]

Advertisement

Wordpress Social Share Plugin powered by Ultimatelysocial