ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ!

 

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ಮತ್ತು ಆಪ್ತರಾದ ಬಸವರಾಜ, ರಮೇಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡಪ್ಪ ಪಾಟೀಲ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲು ಮಾಡಲಾಗಿದೆ.

ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು.

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ’ ಎಂದು ಬರೆದಿರುವ “ಡೆತ್‌ ನೋಟ್‌’ ಒಂದು ವೈರಲ್‌ ಆಗುವುದರೊಂದಿಗೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

ಇತ್ತೀಚೆಗಷ್ಟೇ ಸಂತೋಷ್‌ ಅವರು ಸಚಿವ ಈಶ್ವರಪ್ಪ ವಿರುದ್ಧ ಶೇ. 40 ಕಮಿಷನ್ ಆರೋಪ ಮಾಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಷ್ಯಾ- ಉಕ್ರೇನ್ ಸಂಘರ್ಷದ ನಡುವೆ ಆಮದು-ರಫ್ತು ವ್ಯತ್ಯಯ, ಬೇಡಿಕೆ-ಪೂರೈಕೆ!

Wed Apr 13 , 2022
  ನವದೆಹಲಿ, ಏಪ್ರಿಲ್ 12: ರಷ್ಯಾ- ಉಕ್ರೇನ್ ಸಂಘರ್ಷದ ನಡುವೆ ಆಮದು-ರಫ್ತು ವ್ಯತ್ಯಯ, ಬೇಡಿಕೆ-ಪೂರೈಕೆ ಅಸಮತೋಲನ ಉಂಟಾಗಿದ್ದು, ಮಾರ್ಚ್‌ ತಿಂಗಳಲ್ಲಿ ಭಾರತದಲ್ಲಿ ಗ್ರಾಹಕರ ಬೆಲೆ ಆಧಾರಿತ ಹಣದುಬ್ಬರವು ಶೇಕಡಾ 6.95 ಕ್ಕೆ ಜಿಗಿದಿದೆ. ಅದರಲ್ಲೂ ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ದಿಢೀರ್ ಏರಿಕೆ ಕಾರಣವಾಗಿದೆ ಎಂದು ಸರ್ಕಾರ ಮಂಗಳವಾರದಂದು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ತಿಳಿದು ಬಂದಿದೆ. ಗ್ರಾಹಕರ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರವು ಫೆಬ್ರವರಿಯಲ್ಲಿ ಶೇ 6.07 […]

Advertisement

Wordpress Social Share Plugin powered by Ultimatelysocial