ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪನವರ ತಲೆದಂಡವಾಗಿದೆ.

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪನವರ ತಲೆದಂಡವಾಗಿದೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಈಶ್ವರಪ್ಪ ಇಂದು ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅದಕ್ಕೂ ಮುನ್ನ ತಮ್ಮ ಬೆಂಬಲಿಗರ ಮೂಲಕ ಬಲ ಪ್ರದರ್ಶನ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.

ಈಶ್ವರಪ್ಪನವರು ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ತಮ್ಮ ನೂರಾರು ಬೆಂಬಲಿಗರ ಜೊತೆ ತೆರಳಿ ಬಳಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೂ ಮುನ್ನ ಕಳಿಸಿದ ವಾಟ್ಸಾಪ್‌ ಸಂದೇಶದಲ್ಲಿ ತಮ್ಮ ಸಾವಿಗೆ ನೇರ ಕಾರಣ ಈಶ್ವರಪ್ಪ ಎಂದು ಹೇಳಿರುವುದು ರಾಜೀನಾಮೆಗೆ ಪ್ರಮುಖ ಕಾರಣವೆನ್ನಲಾಗಿದೆ.

ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೆ ಬಿಜೆಪಿ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿರುವಾಗಲೇ ಶೇ.40 ಕಮೀಷನ್‌ ಆರೋಪ ಕೇಳಿ ಬಂದಿರುವುದು ಬಿಜೆಪಿ ಹೈಕಮಾಂಡ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕರೆ ಮಾಡಿ ಈಶ್ವರಪ್ಪರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದರೆಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಲದೇವತೆಯ ದರ್ಶನಕ್ಕೆ ತೆರಳುತ್ತಿದ್ದಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ!

Fri Apr 15 , 2022
ಜೋದ್‍ಪುರ್,ಏ.15- ಕುಲದೇವತೆಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜೋದ್‍ಪುರ್, ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚುರು ಗ್ರಾಮದ ನಿವಾಸಿಗಳಾದ ವಿಜಯ್ ಸಿಂಗ, ಉದಯ್ ಪ್ರತಾಪ್ ಸಿಂಗ್, ಮಂಜು ಕನ್ವರ್, ಪ್ರವೀಣ್‍ಸಿಂಗ್, ದರ್ಪಣ್ ಸಿಂಗ್ ಮತ್ತು ಮಧು ಕೌವಾರ್ ಸಾವನ್ನಪ್ಪಿರುವ ದುರ್ದೈವಿಗಳು. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೆ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial