ಕಚ್ಚಾಬಾಂಬ್ ತಯಾರಿಸಿ ಪ್ರಯೋಗ ಮಾಡುವ ವೇಳೆ ಸ್ಫೋಟ,

ಕೋಲ್ಕತ್ತಾ, ಜು.18- ಕಚ್ಚಾಬಾಂಬ್ ತಯಾರಿಸಿ ಪ್ರಯೋಗ ಮಾಡುವ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟು ಒಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಗೋಪಾಲಪುರದ ಮಾಲ್ಡಾಸ್ ಮಿನಿಚೌಕ್‍ನಲ್ಲಿ ನಿನ್ನೆ ಮಧ್ಯರಾತ್ರಿ 2.30ರ ಸುಮಾರಿನಲ್ಲಿ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಒಟ್ಟು ಮೂವರು ಗಾಯಗೊಂಡು ಬಿದ್ದಿರುವುದು ಪತ್ತೆಯಾಗಿದೆ.

ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಗಾಯಾಳುವನ್ನು ಮಾಲ್ಡಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳ ಪರಿಶೀಲನೆ ನಡೆಸಿದಾಗ ಒಟ್ಟು ನಾಲ್ಕು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಜತೆಗೆ ಭಾರೀ ಪ್ರಮಾಣದ ಸ್ಫೋಟಕಗಳು ಕಂಡುಬಂದಿವೆ.

ಬಾಂಬ್ ನಿರೋಧಕ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸೋಟಕವನ್ನು ನಿಷ್ಕ್ರಿಯಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು. ಉದ್ರಿಕ್ತ ವಾತಾವರಣ ಈಗಲೂ ಹೊಗೆಯಾಡುತ್ತಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಸದರಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರನ್ನು ಫರ್ಜಾನಾ ಎಸ್.ಕೆ. (45), ಶಫೀಕುಲ್ ಇಸ್ಲಾಂ (30) ಎಂದು ಗುರುತಿಸಲಾಗಿದೆ. ಹಿಜಾಬುಲ್ ಎಸ್.ಕೆ. (25) ಗಾಯಗೊಂಡಿದ್ದಾನೆ. ಆರೋಪಿಗಳು ಯಾವ ಕಾರಣಕ್ಕಾಗಿ ಕಚ್ಚಾಬಾಂಬ್ ತಯಾರಿಸುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿಲ್ಲ.

ಇದಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆದಿದ್ದು, ಆರೋಪಿಗಳ ನಿರ್ದಿಷ್ಟ ಉದ್ದೇಶದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಜಿಲ್ಲಾ ಮುಖ್ಯಾಧಿಕಾರಿ ಪ್ರದೀಪ್‍ಕುಮಾರ್ ಯಾದವ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಶಾಲಾ ಬಸ್ಸು, ಪೊಲೀಸ್ ವಾಹನಗಳಿಗೆ ಬೆಂಕಿ,

Sun Jul 17 , 2022
ಕಲ್ಲಕುರಿಚಿ(ತಮಿಳು ನಾಡು):ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಶಾಲಾ ಬಸ್ಸು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯ ಕನ್ನಿಯಮೂರಿನಲ್ಲಿ ಭಾನುವಾರ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರ ಕಿರುಕುಳ ತಾಳಲಾರದೆ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು, ತಮಿಳು ನಾಡು ಶಾಲಾ ಶಿಕ್ಷಣ […]

Advertisement

Wordpress Social Share Plugin powered by Ultimatelysocial