ಫ್ಯಾಕ್ಟರಿ ಯಂತ್ರದ ಬೆಲ್ಟ್ ಗೆ ಸಿಲುಕಿದ ವೇಲ್; ಯುವತಿ ದುರ್ಮರಣ!

 

ಬೆಂಗಳೂರು: ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಡವಟ್ಟು ಸಂಭವಿಸಿದ್ದು, ಯಂತ್ರದ ಬೆಲ್ಟ್ ಗೆ ವೇಲ್ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ Z.S ಫ್ಯಾಕ್ಟಿರಿಯಲ್ಲಿ ಸಂಭವಿಸಿದೆ.ಶಾಜಿಯಾ ಮೃತ ಯುವತಿ.ಶಾಜಿಯಾ ಫ್ಯಾಕ್ಟರಿ ಕೆಲಸ ಮುಗಿಸಿ ಯಂತ್ರದ ಸ್ವಿಚ್ ಆಫ್ ಮಾಡಲು ಹೋಗಿದ್ದಾರೆ. ಈ ವೇಳೆ ಯಂತ್ರದ ಬೆಲ್ಟ್ ಗೆ ಆಕೆಯ ವೇಲ್ ಸಿಲುಕಿದ್ದು, ಬಿಡಿಸಿಕೊಳ್ಳಲು ವೇಲ್ ಎಳೆಯುತ್ತಿದ್ದಂತೆ ಯಂತ್ರವೇ ಯುವತಿಯ ಮೇಲೆ ಬಿದ್ದಿದೆ.ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾಳೆ. ಫ್ಯಾಕ್ಟರಿ ಮಾಲೀಕರ ನಿರ್ಲಕ್ಷವೇ ಯುವತಿ ಸಾವಿಗೆ ಕಾರಣ ಎಂದು ಕುಟುಂಬದವರು ಹಾಗೂ ಕೆಲಸಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫ್ಯಾಕ್ಟರಿ ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!

Sun Apr 3 , 2022
  ಬೆಂಗಳೂರು, ಏಪ್ರಿಲ್ 03; ‘ಇದಪ್ಪಾ ಬಹುಜನ ಹಿತಾಯ, ಬಹುಜನ ಸುಖಾಯ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!’ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. 13 ದಿನಗಳಲ್ಲಿ 8 ರೂ. ಏರಿಕೆಯಾಗಿದ್ದು, ಎಚ್. ಡಿ. ಕುಮಾರಸ್ವಾಮಿ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಟೀಕಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು, ‘ಹಲಾಲ್ ಹಾಲಾಹಲದ ನಡುವೆಯೇ […]

Advertisement

Wordpress Social Share Plugin powered by Ultimatelysocial