ಫಡ್ನವಿಸ್​ ಡಿಸಿಎಂ ಸ್ಥಾನಕ್ಕೆ ತೃಪ್ತಿಪಡೆದುಕೊಂಡರು.

ಮುಂಬೈ: ಏಕನಾಥ್​ ಶಿಂಧೆ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ತೆರೆ ಎಳೆದಿದ್ದಾರೆ.

ಮೊದ ಮೊದಲು ದೇವೇಂದ್ರ ಫಡ್ನವಿಸ್​ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತಾದರೂ, ಕೊನೇ ಗಳಿಗೆಯಲ್ಲಿ ಶಿಂಧೆ ಅವರನ್ನೇ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು.

ಫಡ್ನವಿಸ್​ ಡಿಸಿಎಂ ಸ್ಥಾನಕ್ಕೆ ತೃಪ್ತಿಪಡೆದುಕೊಂಡರು.

ಮಹಾರಾಷ್ಟ್ರದಲ್ಲಿ ಇದೇನೂ ಹೊಸ ಬೆಳವಣಿಗೆಯಲ್ಲ, ಸಿಎಂ ಆಗಿ ಮೆರೆದವರು ನಂತರ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಹಲವು ಉದಾಹರಣೆಗಳಿವೆ. ಇವರಲ್ಲಿ ಐದನೇಯವರು ಫಡ್ನವಿಸ್​ ಆಗಿದ್ದಾರೆ. ಈ ಮೊದಲು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಮಾಡಿದ್ದವರು ನಂತರ ಡಿಸಿಎಂ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಆ ನಾಲ್ವರ ಕುರಿತು ಇಲ್ಲಿದೆ ಮಾಹಿತಿ.

ಶಂಕರ್​ರಾವ್​ ಚವಾಣ್​​: ಕಾಂಗ್ರೆಸ್​ ನಾಯಕರಾಗಿದ್ದ ಇವರು 1975ರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿತ್ತಾರೆ. ಇವರ ಬದಲಾಗಿ 1977ರಲ್ಲಿ ವಸಂತ್​ದಾದ ಪಾಟೀಲ್​ ಅವರನ್ನು ಸಿಎಂ ಆಗಿ ನೇಮಕ ಮಾಡಲಾಗುತ್ತದೆ. ಈ ಬಳಿಕ ಶರದ್​​ ಪವಾರ್​​ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸುತ್ತಾರೆ.

ಶಿವಾಜಿರಾವ್​ ಪಾಟೀಲ್​ ನಿಲಂಗೆಕರ್​: 1985ರಲ್ಲಿ ಮುಖ್ಯಮಂತ್ರಿಯಾಗಿದ್ದ ಇವರು ನಂತರ ಸುಶೀಲ್​ ಕುಮಾರ್ ಶಿಂಧೆ ಅವರ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ನಾರಾಯಣ ರಾಣೆ: 1999ರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಇವರು ಕೂಡ ವಿಲಾಸ್​ ರಾವ್​ ದೇಶ್​ಮುಖ್​ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗುತ್ತಾರೆ.

ಅಶೋಕ್​ ಚವಾಣ್​: 2008 ರಿಂದ 2010ರಲ್ಲಿ ಮಹಾರಾಷ್ಟ್ರದ ಸಿಎಂ ಆಗಿದ್ದ ಚವಾಣ್​, ಉದ್ಧವ್​ ಠಾಕ್ರೆ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಸೇವೆ ಸಲ್ಲಿಸುತ್ತಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಲಿಕಾನ್ ಸಿಟಿ ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ!

Fri Jul 1 , 2022
ಸಿಲಿಕಾನ್ ಸಿಟಿ ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗಂಗಾನಗರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬೆಂಗಳೂರಿನ ಸಮಗ್ರ ಅಭಿವೃದ್ಧಿಯತ್ತ ಹೆಜ್ಜೆ ಇಟ್ಟಿದ್ದೇವೆ. ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ […]

Advertisement

Wordpress Social Share Plugin powered by Ultimatelysocial