ಖ್ಯಾತ ನಟ, ನಿರ್ದೇಶಕ ʻಕೆ ವಿಶ್ವನಾಥ್ʼ ಇನ್ನಿಲ್ಲ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕ ಕಾಸಿನಾಧುನಿ ವಿಶ್ವನಾಥ್ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

92 ವರ್ಷದ ವಿಶ್ವನಾಥ್ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಕಲಾತಪಸ್ವಿ’ ಎಂದೇ ಖ್ಯಾತರಾಗಿರುವ ವಿಶ್ವನಾಥ್, ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಪ್ರಮುಖ ಹೆಸರು ಸಂಪಾದಿಸಿದ್ದು, ಭಾರತೀಯ ಚಿತ್ರರಂಗದ ಅತ್ಯುನ್ನತ ಮನ್ನಣೆಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ 48 ನೇ ಪುರಸ್ಕೃತರಾಗಿದ್ದಾರೆ ಎಂದು ವರದಿ ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸಚಿವ ಗಡ್ಕರಿ ತವರಿನಲ್ಲೇ ಬಿಜೆಪಿಗೆ ಮುಖಭಂಗ;

Fri Feb 3 , 2023
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕಾಂಗ್ರೆಸ್, ಎನ್ ಸಿ ಪಿ ಮೈತ್ರಿಕೂಟದ ಸರ್ಕಾರವನ್ನು ಪತನಗೊಳಿಸಿ ಏಕನಾಥ್ ಶಿಂದೆ ಬಣದ ಶಿವಸೇನೆ ಶಾಸಕರೊಂದಿಗೆ ಸರ್ಕಾರ ರಚಿಸಿರುವ ಬಿಜೆಪಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮುಖಭಂಗವಾಗಿದೆ ಆರ್ ಎಸ್ ಎಸ್ ಪ್ರಧಾನ ಕಚೇರಿ ಹೊಂದಿರುವ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಂತಹ ಘಟಾನುಘಟಿಗಳು ಇರುವ ನಾಗ್ಪುರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ […]

Advertisement

Wordpress Social Share Plugin powered by Ultimatelysocial