ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ.

 

ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ.ಕಡಕೋಳ ಕೈಗಾರಿಕಾ ಪ್ರದೇಶದಲ್ಲಿರುವ ಆಟೋ ಲಿವ್ ಇಂಡಿಯಾ ಪ್ರೈ ಲಿಮಿಟೆಡ್ ಕಾರ್ಖಾನೆಯ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕಾರ್ಖಾನೆ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆವತಿ ಯಿಂದ ಅನಿರ್ದಿಷ್ಟಾ ವಧಿ ಆಹೋರಾತ್ರಿ ಪ್ರತಿಭಟನೆ.ಸಂಘಟನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ.ಮೈಸೂರು ತಾಲೂಕಿನ ಕೆ.ಎಂ.ಹುಂಡಿ ಮತ್ತು ಕಡಕೋಳ ಗ್ರಾಮಗಳ ರೈತರ ಹೋರಾಟ.ಹಸು, ಎತ್ತಿನ ಗಾಡಿಯನ್ನು ತಂದು ಕಾರ್ಖಾನೆ ಒಳಗೆ ಬಿಡುತ್ತೇವೆ ಎಂದು ಆಕ್ರೋಶ. ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ ಕಳೆದ ಒಂದು ವರ್ಷದಿಂದ ಕಾರ್ಖಾನೆಯಲ್ಲಿ ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಕೆಲಸ ನೀಡದೆ ಸತಾಯಿಸುತ್ತಿದ್ದಾರೆ.
ಸುಮಾರು 12 ಕುಟುಂಬಗಳ ರೈತ ಮಕ್ಕಳಿಗೆ ಕಾಯಂ ಉದ್ಯೋಗ ನೀಡಬೇಕು.ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ನೀಡಬೇಕು ಇಲ್ಲವಾದಲ್ಲಿ ರೈತರಿಗೆ ಭೂಮಿ ಬಿಟ್ಟು ಕೊಡಬೇಕು.ನಮ್ಮ ಭೂಮಿ ನಮಗೆ ವಾಪಸ್ ಕೊಡಿ ಇಲ್ಲದಿದ್ದರೆ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಅಧ್ಯಕ್ಷ ಸತೀಶ್ ರಾವ್, ಪ್ರಧಾನ ಕಾರ್ಯದರ್ಶಿ, ಇಮ್ಮಾವು ರಘು, ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್, ಜಿಲ್ಲಾ ಸಂಚಾಲಕ ಕುಮಾರ್ ಬಸಪ್ಪ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದರು

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

" ಟ್ರೇಲರ್ ಮೂಲಕ ಗಮನ ಸೆಳೆದಿರುವ "ಚೌಕಾಬಾರ" ಚಿತ್ರ ಮಾರ್ಚ್ ಹತ್ತರಂದು ತೆರೆಗೆ "

Thu Mar 2 , 2023
ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ “ಚೌಕಾಬಾರ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಸಾಹಿತಿಗಳಾದ ಹೆಚ್ ಎಸ್ ವೆಂಕಟೇಶ್ ಮೂರ್ತಿ, ಬಿ.ಆರ್ ಲಕ್ಷ್ಮಣರಾವ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಭಾ.ಮ.ಹರೀಶ್, ನಟ ಸುಂದರರಾಜ್, ಲಹರಿ ವೇಲು, ರಘು ಭಟ್, ನಿರ್ಮಾಪಕ ಸಂಜಯ್ ಗೌಡ , ಸಚಿವ ಆರ್ ಅಶೋಕ್ ಪುತ್ರ ಶರತ್, ಉದ್ಯಮಿ ಉಮೇಶ್ ಕುಮಾರ್‌, ಸಂಜಯ್ ಸೂರಿ […]

Advertisement

Wordpress Social Share Plugin powered by Ultimatelysocial