ರೈತರಿಗೆ ಮತ್ತೊಂದು ಗುಡ್ ನ್ಯೂಸ್.

 

ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಿವೆ ಎಂಬುದನ್ನು ತಿಳಿಸುವುದು ಫಲಾನುಭವಿಗಳ ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಶನಿವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಹಾಗೂ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 1,484.69 ಕೋಟಿ ರೂ.ಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರೈತರು, ಮಹಿಳೆಯರು, ಯುವಕ ಯುವತಿಯುರು, ದೀನದಲಿತರು ಸೇರಿದಂತೆ ಎಲ್ಲಾ ವರ್ಗದ ಶ್ರೇಯೋಭಿವೃದ್ಧಿಗಾಗಿ ದೂರದೃಷ್ಟಿ ಯೋಜನೆಗಳನ್ನು ನಮ್ಮ ಸರ್ಕಾರದಲ್ಲಿ ಅವಳವಡಿಸಿಕೊಳ್ಳಲಾಗಿದೆ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದೆ. ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ 10,000 ರೂ. ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು. ಬಿತ್ತನೆ ಬೀಜ, ಗೊಬ್ಬರ ಖರೀದಿಗಾಗಿ ರೈತರು ಸಾಲ ಮಾಡದಂತೆ ತಡೆಯುಲು ಯೋಜನೆ ಜಾರಿಗೊಳಿಸಲಾಗುತ್ತಿದೆ.ಮನೆ ಖರ್ಚು ನಿಭಾಯಿಸಲು ಹೆಣ್ಣು ಮಕ್ಕಳಿಗೆ ಮಾಸಿಕ 1000 ರೂ., ದುಡಿಯವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ. ಅನುದಾನ, ಸ್ವಾಮಿ ವಿವೇಕಾನಂದ ಯೋಜನೆಯಡಿ ಯುವಕರ ಸಂಘಕ್ಕೆ 2 ಲಕ್ಷ ರೂ. ಅನುದಾನ ನೀಡಿ, ಸಂಘದ ಉತ್ಪನಗಳಿಗೆ ಮಾರುಕಟ್ಟೆ ಒದಗಿಸಲಾಗುವುದು. ಕಾಯಕ ಯೋಜನೆಯಡಿ ಗುಡಿ ಕೈಗಾರಿಕೆ ಸೇರಿದಂತೆ ಕಮ್ಮಾರಿಕೆ, ಕುಂಬಾರಿಕೆ, ಬಡಗಿ ಹಾಗೂ ಇತರೆ ವಿಶ್ವಕರ್ಮ ಕಾಯಕಗಳನ್ನು ಉನ್ನತಿಕರಿಸಲು ರೂ.50 ಸಾವಿರ ಅನುದಾನ ನೀಡಲಾಗುವುದು. ಈ ಬಾರಿ ಸರ್ಕಾರಿ ಕಾಲೇಜುಗಳಲ್ಲಿ ಓದುವ ಪಿಯುಸಿ ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಚಿತ್ರದುರ್ಗ ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಒಂದು ವಾರದಲ್ಲಿ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಆಶ್ವಾಸನೆ ನೀಡಿದರು. ಶೀಘ್ರದಲ್ಲಿ ಮತ್ತೊಮ್ಮೆ ಚಿತ್ರದುರ್ಗ ನಗರಕ್ಕೆ ಆಗಮಿಸಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಯನ್ನೂ ನೆರವೇರಿಸುವುದಾಗಿ ಹೇಳಿದರು.ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳು ದಲಿತರಿಗೆ, ಪರಿಶಿಷ್ಟ ಪಂಗಡಕ್ಕೆ ಅವಶ್ಯಕವಾಗಿರುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಪರಿಶಿಷ್ಟ ಜಾತಿಗೆ ಶೇ.15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿ ಪರಿಶಿಷ್ಟ ವರ್ಗದವರ ಹೃದಯ ಗೆದ್ದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮನವಿ.

Sun Mar 5 , 2023
      ಹಿಂದೂಯಿಸಂನಲ್ಲಿ ಗೋವುಗಳು ದೇವರು ಹಾಗೂ ಕಾಮಧೇನು ಎಂಬ ನಂಬಿಕೆ ಹಾಗೂ ವಿಶ್ವಾಸ ಇದೆ. ಅದನ್ನು ಕಾಪಾಡುವ ಹಾಗೂ ಗೌರವಿಸುವ ಅಗತ್ಯವಿದೆ. ಹಾಗಾಗಿ ಅವುಗಳ ಹತ್ಯೆಯನ್ನು (Cow Slaughter) ತಡೆಯಲು ಕೇಂದ್ರ ಸರ್ಕಾರವು ಗೋಹತ್ಯೆ ನಿಷೇಧಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಮತ್ತು ಅವುಗಳನ್ನು ‘ಸಂರಕ್ಷಿತ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಣೆ ಮಾಡಲಿದೆ ಅಲಹಾಬಾದ್ ಹೈಕೋರ್ಟ್ ಭರವಸೆ ವ್ಯಕ್ತಪಡಿಸಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿರುವ […]

Advertisement

Wordpress Social Share Plugin powered by Ultimatelysocial