“ಟಾಕ್ ಆಫ್ ದಿ ಟೌನ್-ಅಂತಾರಾಷ್ಟ್ರೀಯ ಫ್ಯಾಷನ್ ವೀಕ್ “

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ “ಟಾಕ್ ಆಫ್ ದಿ ಟೌನ್-ಅಂತಾರಾಷ್ಟ್ರೀಯ ಫ್ಯಾಷನ್ ವೀಕ್ ” ನಡೆಯಲಿದ್ದು, 40 ಸೂಪರ್ ಮಾಡೆಲ್‌ಗಳು ಫ್ಯಾಷನ್ ಶೋನಲ್ಲಿ ಹೆಜ್ಜೆ ಹಾಕಲಿದ್ದಾರೆ.ಇದೇ ಫೆ.18ರ ಸಂಜೆ 5ಕ್ಕೆ ವೈಟ್‌ಫೀಲ್ಡ್‌ನಲ್ಲಿರುವ ಮ್ಯಾರಿಯೆಟ್ ಹೋಟೆಲ್‌ನಲ್ಲಿ ಫ್ಯಾಷನ್ ವೀಕ್ ನಡೆಯಲಿದ್ದು, ಜಯಂತಿ ಬಲ್ಲಾಳ್, ರೇಷ್ಮಾ ಕುನ್ಹಿ, ಸಮಂತಾ ಅರ್ಪಣಾ, ಮಾನವ್, ವೈಲ್ಡ್‌ಕ್ಯಾಟ್ ಅವರಂತಹ ಪ್ರಖ್ಯಾತ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್‌ಗಳು ವಿನ್ಯಾಸಗೊಳಿಸಿರುವ ಭಿನ್ನ ವಿಭಿನ್ನವಾದ ನೂತನ ಶೈಲಿಯ ಧಿರಿಸುಗಳು ಹಾಗೂ ಆಭರಣಗಳನ್ನು ಧರಿಸಿ ಮಾಡೆಲ್‌ಗಳು ರ‍್ಯಾಂಪ್ ಮೇಲೆ ಹೆಜ್ಜೆ ಹಾಕಲಿದ್ದಾರೆ.ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಚೆನ್ನೈನ ಕರುಣ್ ರಾಮನ್ ಈ ಫ್ಯಾಷನ್ ಶೋನ ಡೈರೆಕ್ಟರ್ ಆಗಿದ್ದು, ನಂದಿನಿ ನಾಗರಾಜ್ ಅವರು ಆಯೋಜಕರಾಗಿದ್ದು, ಸದಾಶಿವನಗರದ ಗಣೇಶ್ ಗೋಲ್ಡ್ ಅಂಡ್ ಡೈಮೆಂಡ್ ಜ್ಯೂವೆಲ್ಲರಿ ಹಾಗೂ ಕೀರ್ತಿಲಾಲ್ಸ್ ಡೈಮೆಂಡ್ಸ್ ಅಂಡ್ ಗೋಲ್ಡ್ ಜ್ಯುವೆಲ್ಲರಿ ಈ ಫ್ಯಾಷನ್ ವೀಕ್‌ನ ಸಹ ಪ್ರಾಯೋಜಕರಾಗಿದ್ದಾರೆ.ಧ್ರುವ ಪ್ರೊಡಕ್ಷನ್ ಪಾರ್ಟ್‌ನರ್ ಆಗಿದ್ದು, ನಟಿಯರಾದ ಶ್ವೇತಾ ಶ್ರೀವಾತ್ಸವ್, ಇತಿ ಆಚಾರ್ಯ, ನಟ ಜಯರಾಮ್ ಕಾರ್ತಿಕ್ಅ ತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಾವುದೇ ಧಾರ್ಮಿಕ ಗುರುತು ಧರಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರು!

Mon Feb 14 , 2022
ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಧರಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಮಾತ್ರವಲ್ಲ ಶಿಕ್ಷಕಿಯರು ಕೂಡ ಹಿಜಾಬ್ ಧರಿಸಿ ಶಾಲೆಗೆ ಬಂದ ಘಟನೆ ನಡೆದಿದೆ.ಕಲಬುರ್ಗಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ಧರಿಸಿ ಶಾಲೆಗೆ ಆಗಮಿಸಿದ್ದಲ್ಲದೇ, ತರಗತಿಗಳನ್ನು ತೆಗೆದುಕೊಂಡಿದ್ದಾರೆ. ಕ್ಲಾಸ್ ರೂಮ್ ನಲ್ಲಿ ಹಲವು ವಿದ್ಯಾರ್ಥಿನಿಯರು ಕೂಡ ಹಿಜಾಬ್ […]

Advertisement

Wordpress Social Share Plugin powered by Ultimatelysocial