ಎಳನೀರು ಕುಡಿದರೆ ಸೌಂದರ್ಯವೂ ಹೆಚ್ಚುತ್ತದೆ!

ಎಳನೀರು ದೇಹಕ್ಕೆ ಅಗತ್ಯವಾದ ಬಹಳಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ.
ಈ ಪೋಷಕಾಂಶಗಳನ್ನು ಪಡೆದ ದೇಹ ಶೀಘ್ರ ತನ್ನ ಚಟುವಟಿಕೆಗಳನ್ನು ಪೂರ್ಣ ಕ್ಷಮತೆಯಲ್ಲಿ ನಿರ್ವಹಿಸಲು ಸಬಲಗೊಳ್ಳುತ್ತದೆ.
ಎಳನೀರಿನ ಉಪಯೋಗ ಕೇವಲ ಕುಡಿಯುವುದಕ್ಕಲ್ಲ, ಸರಿಯಾಗಿ ಬಳಸಿದರೆ ದೇಹದ ಹೊರಭಾಗಗಳಾದ ಚರ್ಮ ಮತ್ತು ಕೂದಲ ಆರೈಕೆಗೂ ಒಳ್ಳೆಯದು.

ಜೀರ್ಣಕ್ರಿಯೆ
ಎಳನೀರಿನಲ್ಲಿ ಫೋಲಿಕ್ ಆಯಸಿಡ್, ಫಾಸ್ಪೇಟೇಸ್, ಕ್ಯಾಟಲೇಸ್, ಡಿಹೈಡ್ರೋಜೀನೇಸ್, ಡೈಯಾಸ್ಟೇಸ್, ಪೆರಾಕ್ಸಿಡೇಸ್, ಆರ್.ಎನ್.ಎ ಪಾಲಿಮರೇಸಸ್ ಮೊದಲಾದ ಕಿಣ್ವಗಳು ಇದೆ. ಇವುಗಳು ವಿವಿಧ ರೀತಿಯ ಆಹಾರಗಳು ಸುಲಭವಾಗಿ ಜೀರ್ಣವಾಗಲು ನೆರವಾಗುತ್ತವೆ. ಇದರಿಂದ ಆಹಾರಗಳ ಉತ್ತಮ ಅಂಶಗಳು ದೇಹಕ್ಕೆ ಸುಲಭವಾಗಿ ಲಭ್ಯವಾಗಿ ಆರೋಗ್ಯ ವೃದ್ಧಿಸುತ್ತದೆ.

ಆರೋಗ್ಯ
ಎಳನೀರಿನಲ್ಲಿ ಒಮೆಗಾ 3 ಹೇರಳವಾಗಿ ಇರುವುದರಿಂದ ಗರ್ಭದಲ್ಲಿನ ಮಗುವಿನ ಮೆದುಳಿನ ಬೆಳವಣಿಗೆ ಚುರುಕಾಗಲು ಒಮೆಗಾ 3 ಸಹಾಯ ಮಾಡುತ್ತದೆ. ಗರ್ಭಿಣಿಯರು ತಮ್ಮ ಆರೋಗ್ಯಕ್ಕೆ ಹಾಗೂ ಮಗುವಿನ ಆರೋಗ್ಯ ವೃದ್ಧಿಗಾಗಿ ಎಳನೀರು ಸೇವಿಸುವುದು ಉತ್ತಮ ಎಂದು ವೈದ್ಯರು ಸಲಹೆ ನೀಡುತ್ತಾರೆ.

ನೀರಿನ ಅಗತ್ಯ ಪೂರೈಕೆ
ಎಳನೀರಿನಲ್ಲಿರುವ ವಿವಿಧ ಖನಿಜ, ಲವಣ ಮತ್ತು ಸಕ್ಕರೆಯ ಅಂಶ ದೇಹಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇರುವುದರಿಂದಲೇ ಇದೊಂದು ಅಮೃತಸಮಾನವಾದ ಪಾನೀಯವಾಗಿದೆ. ದೈಹಿಕ ಚಟುವಟಿಕೆಗಳಿಗೆ ಈ ನೀರು ಅತ್ಯಂತ ಸಮರ್ಪಕ ಪ್ರಮಾಣದಲ್ಲಿ ಪೋಷಕಾಂಶಗಳನ್ನು ನೀಡುವುದರಿಂದ ಶರೀರ ತನ್ನ ಚಟುವಟಿಕೆಗಳನ್ನು ಹೆಚ್ಚು ಸಮಯ ನಿರ್ವಹಿಸಬಹುದು. ಹೆಚ್ಚಿನ ದೈಹಿಕ ಶ್ರಮವುಳ್ಳ ಕೆಲಸಕ್ಕೆ ಪ್ರತಿದಿನ ಒಂದಾದರೂ ಎಳನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಳಿಗಾಲದಲ್ಲಿ ಮಕ್ಕಳ ರಕ್ಷಣೆಯನ್ನು ಹೀಗೆ ಮಾಡಿ

Tue Dec 21 , 2021
ಕಲಬುರಗಿ: ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಈಗ ಶೀತಗಾಳಿ ಹೆಚ್ಚಾಗಿದೆ. ದೈನಂದಿನ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇಂಥ ವಾತಾವರಣದಲ್ಲಿ ಮಕ್ಕಳಿಗೆ ಬರುವ ಸಾಮಾನ್ಯ ಕಾಯಿಲೆಗಳು ಯಾವವು? ಅವುಗಳಿಂದ ಪಾರಾಗಲು ಮುಂಜಾಗೃತಾ ಕ್ರಮಗಳೇನು ಎಂಬ ಬಗ್ಗೆ ಮಕ್ಕಳ ತಜ್ಞೆ ಡಾ.ಅರುಂಧತಿ ಪಾಟೀಲ ಕೆಲವು ಸಲಹೆ ನೀಡಿದ್ದಾರೆ. ‘ಚಳಿಗಾಲ ಬಂದ ತಕ್ಷಣ ಮಕ್ಕಳಲ್ಲಿ ಕಫ, ಕೆಮ್ಮು ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ […]

Advertisement

Wordpress Social Share Plugin powered by Ultimatelysocial